ಪ್ರೀತಿಸಿದ ಯುವನೊಂದಿಗೆ ಮದುವೆಯಾಗಲು ಕುಜ ದೋಷ ಅಡ್ಡಿಯಾಗಿದ್ದರಿಂದ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಸುಧಾ ಎಂದು ಗುರುತಿಸಲಾಗಿದೆ. ಭದ್ರಾವತಿ ತಾಲೂಕಿನ ಕಲ್ಲಾಪುರ ನಿವಾಸಿಯಾಗಿರುವ ಪೊಲೀಸ್ ಕಾನ್ಸ್ಟೇಬಲ್ ಸುಧಾ ಹಾಗೂ ಭದ್ರಾವತಿ ಅರಣ್ಯ ವಲಯದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ಮೂಲದ ಪ್ರವೀಣ್ ಆರು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರಿಬ್ಬರ ಪ್ರೀತಿಗೆ ಹೆತ್ತವರ ವಿರೋಧವಿತ್ತು.
ಆರಂಭದಲ್ಲಿ ಇವರಿಬ್ಬರ ಪ್ರೀತಿಗೆ ಜಾತಿ ಅಡ್ಡಿಯಾಗಿತ್ತು. ಜಾತಿ ಅಡ್ಡಿಯ ನಡುವೆಯೂ ಇಬ್ಬರು ಮದುವೆಗೆ ಸಿದ್ಧರಾಗಿದ್ದರು. ಆದರೆ ಪ್ರವೀಣ್ ತಾಯಿ ಯುವತಿಯ ಜಾತಕವನ್ನು ಜ್ಯೋತಿಷಿಯೊಬ್ಬರಿಗೆ ತೋರಿಸಿದ್ದರು. ಜ್ಯೋತಿಷಿ ಈ ಯುವತಿಗೆ ಕುಜ ದೋಷ ಇದೆ. ಇವಳೊಂದಿಗೆ ವಿವಾಹವಾದರೆ ನಿಮ್ಮ ಮಗನ ಆಯಸ್ಸು ಕಡಿಮೆ ಎಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುಜ ದೋಷ ಇರುವ ಹುಡುಗಿ ಜೊತೆ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಪ್ರವೀಣ್ ತಾಯಿ ತಿಳಿಸಿದ್ದರು.
ಅಲ್ಲದೇ ಯುವತಿ ಸುಧಾಳಿಗೂ ಫೋನ್ ಮಾಡಿ ನನ್ನ ಮಗನ ಸಹವಾಸ ಬಿಟ್ಟು ಬಿಡು. ಈ ಮದುವೆ ಮಾಡಲು ಸಾಧ್ಯವಿಲ್ಲ ಎಂದು ಆವಾಜ್ ಕೂಡ ಹಾಕಿದ್ದರಂತೆ. ಇದರಿಂದ ಮನನೊಂದ ಪ್ರೇಮಿಗಳು ಮೇ.31ರಂದು ಭದ್ರಾವತಿಯ ಎಪಿಎಂಸಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು.
ನಂತರ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಯುವತಿ ಸುಧಾಳನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್