w
Headlines
Home » ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ವಿಲೀನ ಪ್ರಕ್ರಿಯೆ ಕೈ ಬಿಡಲಾಗಿದೆ : ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ

ಹೊಸನಗರ ಎಪಿಎಂಸಿ ಮಾರುಕಟ್ಟೆಯನ್ನು ಸಾಗರ ಎಪಿಎಂಸಿಯೊಂದಿಗೆ ಸಂಯೋಜಿಸಿರುವ ಪ್ರಕ್ರೀಯೆಯನ್ನು ಕೈ ಬಿಡಲಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಸ್ಪಷ್ಟನೆ ನೀಡಿದ್ದಾರೆ.

ಸಾಗರ – ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಒಟ್ಟುಗೂಡಿಸುವ ಕುರಿತು ಸಾರ್ವಜನಿಕರಿಂದ ಆಕ್ಷೇಪಣೆಗಳು ಬಂದ ಕಾರಣ  ಸರ್ಕಾರದೊಂದಿಗೆ ಚರ್ಚಿಸಿ ಪ್ರಸ್ತಾವನೆಯನ್ನು ಕೈಬಿಡುವಂತೆ ಕೋರಲಾಗಿತ್ತು ಈ ಹಿನ್ನಲೆಯಲ್ಲಿ ಸದರಿ ಪ್ರಸ್ತಾವನೆಯನ್ನು ಕೈಬಿಡಲು ಸರ್ಕಾರದಿಂದ ಸಮ್ಮತಿ ದೊರೆತಿದ್ದು, ಈ ಹಿಂದಿನಂತೆಯೆ ಸಾಗರ ಮತ್ತು ಹೊಸನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕರ್ತವ್ಯ ನಿರ್ವಹಿಸುತ್ತವೆ ಹಾಗು ಕೃಷಿ ಉತ್ಪನ್ನ ಮಾರುಕಟ್ಟೆ ಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರತಾಳು ಹಾಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.