ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ.
ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ ಪ್ರತಾಪ್ ನ ಬೆನ್ನು ಬಿದ್ದಿದ್ದ ಪೊಲೀಸರು ಇಂದು ಹೊಸನಗರ ಮೂಲಕ ಮಂಗಳೂರಿಗೆ ತೆರಳುತ್ತಿರುವ ಖಚಿತ ಮಾಹಿತಿ ಮೇರೆಗೆ ಹೊಸನಗರ ಪಟ್ಟಣದಲ್ಲಿ ಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಡಿವೈಎಸ್ಪಿ ಶಾಂತವೀರ ಹಾಗೂ ಸಿಪಿಐ ಗಿರೀಶ್ ಮಾರ್ಗದರ್ಶನದಲ್ಲಿ ಪಿಎಸ್ ಐ ಶಿವಾನಂದ ಕೋಳಿ ಹಾಗೂ ಸಿಬ್ಬಂದಿಗಳು ಟ್ರಾಕ್ಟರ್ ಕಳ್ಳತನದ ಆರೋಪಿ ಪ್ರತಾಪ್ ನನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಶನಿವಾರದಂದು ರಾತ್ರಿ ಸಾಗರ ರಸ್ತೆಯ ವಡಗೆರೆಯಲ್ಲಿರುವ ಉದ್ಯಮಿ ವೆಂಕಪ್ಪ ಶೆಟ್ಟಿ ರವರ ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕಳ್ಳತನವಾಗಿತ್ತು.ಈ ಬಗ್ಗೆ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ CR 66/22, IPC 379 ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಟ್ರಾಕ್ಟರ್ ಕಳ್ಳತನದ ಸಂಶಯದ ಮೇಲೆ ವಡಗೆರೆಯ ನಿವಾಸಿ ಪ್ರತಾಪ್ ರನ್ನು ಪತ್ತೆ ಮಾಡಿ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತಿತ್ತು.ಅಂದು ಬೆಳಿಗ್ಗೆ ಠಾಣೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿ ಮೇಲೆ ಹಲ್ಲೆ ಎಸಗಿ ಕಾಂಪೌಂಡ್ ಹಾರಿ ಪರಾರಿಯಾದ ಘಟನೆ ನಡೆದಿತ್ತು.ಟ್ರ್ಯಾಕ್ಟರ್ ಕಳ್ಳತನ ಮಾಡಿದ ವ್ಯಕ್ತಿಯನ್ನು ಸೋಮವಾರ ಮಧ್ಯಾಹ್ನ ಸಂಶಯದ ಮೇಲೆ ವಿಚಾರಣೆಗಾಗಿ ಠಾಣೆಗೆ ಕರೆತರಲಾಗಿದ್ದು ರಾತ್ರಿಯೆಲ್ಲ ಠಾಣೆಯಲ್ಲಿಟ್ಟುಕೊಳ್ಳಲಾಗಿತ್ತು.ಅಂದು ಬೆಳಗ್ಗೆ ಶೌಚಾಲಯಕ್ಕೆ ಹೋದವನು ಹೊರಬರುತ್ತಿದ್ದಂತೆ ಅಲ್ಲೆ ಇದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ಎಸಗಿ ಕಾಂಪೌಂಡ್ ಗೋಡೆ ಹಾರಿ ಪರಾರಿಯಾಗಿದ್ದನು.