ಅನಾರೋಗ್ಯಕ್ಕೆ ಬೇಸತ್ತು ನೇಣಿಗೆ ಶರಣಾದ ಗೃಹಿಣಿ | Crime News
ಸೊರಬ: ಹೊಟ್ಟೆನೋವು ತಾಳಲಾರದೆ ನೇಣು ಬಿಗಿದುಕೊಂಡು ಗೃಹಿಣಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ವಿದ್ಯುತ್ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಪಟ್ಟಣದಲ್ಲಿ ಬ್ಯೂಟಿಪಾರ್ಲರ್ ನಡೆಸುತ್ತಿದ್ದ ಅಕ್ಷತಾ (30) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯು ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ.
ಭದ್ರಾವತಿ ತಾಲೂಕಿನ ಕೆರೆಭೀರನಹಳ್ಳಿ ಗ್ರಾಮದ ಅಕ್ಷತಾ ಅವರನ್ನು ಚಂದ್ರಗುತ್ತಿ ಗ್ರಾಮದ ಸಂತೋಷ್ ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.
ಈ ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.