ತೀರ್ಥಹಳ್ಳಿ ತಾಲೂಕಿನ ಆರಗ ಸಮೀಪ ದಲಿತ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮೇ 9 ರ ರಾತ್ರಿ ಆರಗ ಬಳಿ ನಾಲ್ವರು ದುಷ್ಕರ್ಮಿಗಳು ದಲಿತ ಮಹಿಳೆ ಮತ್ತು ಆಕೆಯ ಗಂಡನ ಮೇಲೆ ಹಲ್ಲೆ ಮಾಡಿದ್ದರು. ಬಳಿಕ ದಲಿತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರು ಎಂದು ದೂರು ದಾಖಲಾಗಿತ್ತು. ಸದ್ಯ ಹಲ್ಲೆಗೊಳಗಾದ ಮಹಿಳೆ ಮತ್ತು ಆಕೆಯ ಪತಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತೀರ್ಥಹಳ್ಳಿ ಸಿಪಿಐ ಸಂತೋಷ್ ನೇತೃತ್ವದ ತಂಡ ಇಬ್ಬರು ಆರೋಪಿಗಳನ್ನ ಬಂಧಿಸಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಆದರ್ಶ ಮತ್ತು ಸಂಪತ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಆರೋಪಿಗಳು ಘಟನೆ ಬಳಿಕ ತಲೆಮರೆಸಿಕೊಂಡಿದ್ದರು. ಮತ್ತಿಬ್ಬರು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.