ನಿನ್ನೆ ರಾತ್ರಿ ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನ ಬಂಧಿಸಲಾಗಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿಕೆ ನೀಡಿದ್ದಾರೆ.
ನಿನ್ನೆ ರಾತ್ರಿ ಬೈಕಲ್ಲಿ ಕಾರನ್ನು ಹಿಂಬಾಲಿಸಿ ರಾಡಿನಿಂದ ಕಾರಿನ ಹಿಂಬದಿ ಗಾಜು ಒಡೆದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನ ಗುರುತಿಸಲಾಗಿದ್ದು, ಓರ್ವ ಆರೋಪಿ ಅಜ್ಗರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ರಸ್ತೆ ಕಿರಿಯದಾಗಿದ್ದು ನಿಧಾನವಾಗಿ ಕಾರು ಚಲಿಸುತ್ತಿತ್ತು. ಈ ವೇಳೆ ಬೈಕ್ನಲ್ಲಿ ಬಂದ ಇಬ್ಬರು ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ. ಕುಡಿದ ಅಮಲಿನಲ್ಲಿ ಈ ಕೃತ್ಯವೆಸಗಿರಬಹುದು ಹಾಗೂ ಗಾಂಜಾ ಸೇವನೆ ಮಾಡಿದ್ದರ ಇಲ್ಲವೇ ಎನ್ನುವುದರ ಬಗ್ಗೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರೇ ಸುಮೊಟೋ ಕೇಸ್ ದಾಖಲಿಸಿಕೊಂಡಿದ್ದಾರೆ. ಇನ್ನೂ ಆರೋಪಿಗಳ ಪೈಕಿ ಬೈಕ್ ಚಾಲನೆ ಮಾಡುತ್ತಿದ್ದವನನ್ನ ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿಗಾಗಿ ಬಲೆ ಬೀಸಲಾಗಿದೆ. ಇವರಿಬ್ಬರ ಪೈಕಿ ಓರ್ವನ ಮೇಲೆ ಗಾಂಜಾ ಕೇಸ್ ಕೂಡ ಈ ಹಿಂದೆ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.