ರಿಪ್ಪನ್ ಪೇಟೆ : ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾರವರ ಅಧ್ಯಕ್ಷತೆಯಲ್ಲಿ ಚಿಕ್ಕಬೀರನಕೆರೆ ಕೆರೆ ಹೂಳು ತೆಗೆಯುವ ಬಗ್ಗೆ ಸಾರ್ವಜನಿಕರ ಸಮಾಲೋಚನಾ ಸಭೆ ನಡೆಯಿತು.
ಈ ಸಂಧರ್ಭದಲ್ಲಿ ಮಾತನಾಡಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಸರ್ಕಾರ ಮಾಡದಂತಹ ಅಭಿವೃದ್ದಿ ಕಾರ್ಯಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಿಶ್ವಾರ್ಥ ಸೇವೆಯ ಮೂಲಕ ಕೆರೆಗಳ ಪುನಶ್ಚೇತನಕ್ಕೆ ಹೆಚ್ಚು ಆದ್ಯತೆ ನೀಡುವುದರೊಂದಿಗೆ ಕೆರೆಗಳಲ್ಲಿನ ಹೂಳು ತೆಗೆದು ಅಂತರ್ಜಲ ಹೆಚ್ಚಿಸುವ ಕಾರ್ಯದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿಗಳ ಕನಸು ನನಸಾಗಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿ, ಈಗಾಗಲೇ ನಮ್ಮೂರು ನಮ್ಮ ಕೆರೆ ವಿಚಾರದಲ್ಲಿ ಸಾರ್ವಜನಿಕರ ಸಹಭಾಗಿತ್ವದ ಕುರಿತು ಸ್ವಪ್ರೇರಣೆಯೊಂದಿಗೆ ಸಾರ್ವಜನಿಕರು ಇಂತಹ ಅಭಿವೃದ್ಧಿ ಕಾರ್ಯದಲ್ಲಿ ಪಕ್ಷ ಬೇದ ಮರೆತು ಸಹಕರಿಸುವಂತೆ ಮನವಿ ಮಾಡಿದರು.

ನಂತರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸಿದ್ದಿವಿನಾಯಕ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್ ರವರನ್ನು ಕೆರೆ ಸಮಿತಿಯ ಅಧ್ಯಕ್ಷರನ್ನಾಗಿ ಅಮೀರ್ ಹಂಜಾ ಉಪಾಧ್ಯಕ್ಷರಾಗಿ ಎಂ.ಬಿ.ಮಂಜುನಾಥ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಸುಮಾರು 23 ಜನರನ್ನು ಸಮಿತಿಯ ಸದಸ್ಯರಾಗಿ ಅಯ್ಕೆ ಮಾಡಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕಿ ಗೀತಾ ಮಾತನಾಡಿ ಯೋಜನೆಯಿಂದ ಬಂದಂತ ಹಣ ದುರ್ಬಳಕೆ ಆಗದೆ ಕೆರೆಯ ನವೀಕರಣಕ್ಕೆ ಸರಿಯಾದ ಮಾರ್ಗದಲ್ಲಿ ಸದ್ಬಳಕೆಯಾಗಬೇಕು ಸಮಿತಿಯವರು ಸಹಕಾರ ಬಹುಮುಖ್ಯವಾಗಿದೆ ಉತ್ತಮ ಸಮಿತಿ ಆದರೆ ಯೋಜನೆಯಿಂದ ಬಂದ ಹಣವನ್ನು ಸರಿಯಾದ ಮಾರ್ಗದಲ್ಲಿ ವಿನಿಯೋಗಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.
>ಈ ಸಂಧರ್ಭದಲ್ಲಿ ಹೊಸನಗರ ತಾಲ್ಲೂಕ್ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಬೇಬಿ,ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ, ಉಪತಹಶೀಲ್ದಾರ್ ಹುಚ್ಚರಾಯಪ್ಪ ,ಕೆರೆ ಸಂಪನ್ಮೂಲ ಯೋಜನೆಯ ಇಂಜಿನಿಯರ್ ಗಣಪತಿ, ಕೃಷಿ ಮೇಲ್ವಿಚಾರಕ ಶಶಿಧರ, ಪಿಡಿಓ ಜಿ.ಚಂದ್ರಶೇಖರ್, ರಿಪ್ಪನ್‌ಪೇಟೆ ಮೇಲ್ವಿಚಾರಕ ಹರೀಶ್ ಹಾಗೂ ಇನ್ನಿತರರು ಹಾಜರಿದ್ದರು.