Accident | ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿಯಾದ ಖಾಸಗಿ ಬಸ್
ತೀರ್ಥಹಳ್ಳಿ : ತೀರ್ಥಹಳ್ಳಿ – ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಒಂದು ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತವಾಗಿದೆ.
ಇಂದು ಬೆಳಗ್ಗೆ 10.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಳಸದಿಂದ ಶಿವಮೊಗ್ಗಕ್ಕೆ ಬರುವ ಖಾಸಗಿ ಬಸ್ ಮಂಡಗದ್ದೆಯ 15 ನೇ ಮೈಲಿಕಲ್ಲಿನ ಬಳಿ ಹೋಗುತ್ತಿರುವ ವೇಳೆ ಬಸ್ ಚಾಲಕ ಎದುರಿಗೆ ಸಾಗುತ್ತಿದ್ದ ವಾಹನವನ್ನ ಓವರ್ ಟೇಕ್ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತನ ನಿಯಂತ್ರಣ ತಪ್ಪಿದ ಬಸ್ ಇನ್ನೊಂದು ವಾಹನಕ್ಕೆ ಡಿಕ್ಕಿಯಾಗಿ ರಸ್ತೆ ಪಕ್ಕದ ಮರವೊಂದಕ್ಕೆ ಡಿಕ್ಕಿಯಾಗಿದೆ.
ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಮಗುವು ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿ ಎನ್ನಲಾಗಿದೆ. ಇನ್ನೂ ಘಟನೆಯಲ್ಲಿ ಬಸ್ನ ಒಂದು ಬದಿ ಬಹುತೇಕ ನುಜ್ಜುಗುಜ್ಜಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್