ಹೊಸನಗರ ತಾಲೂಕಿನ ಎಂ.ಗುಡ್ಡೇಕೊಪ್ಪದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹೆಚ್ಚುವರಿ ಪ್ರಭಾರ ಪಿಡಿಒ ಮುರುಗೇಶ್ ಎಸಿಬಿ ಬಲೆಗೆ ಬಿದ್ದಿದ್ದಾನೆ.
ಇಂದು ಬೆಳಿಗ್ಗೆ ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆಬಿದ್ದಿದ್ದಾನೆ.
ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್, ಮುಟೇಷನ್ ಮತ್ತು 9 ಮತ್ತು 11 ಅರ್ಜಿ ಅನುಮತಿ ಮಾಡಿಕೊಡಲು ಎಂ.ಗುಡ್ಡೇಕೊಪ್ಪಕ್ಕೆ ಅರ್ಜಿ ಸಲ್ಲಿಸಿದ್ದರು. ಸತೀಶ್ ಕೆಲಕ್ಕೆ ಪಿಡಿಒ ಮುರುಗೇಶ್ 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದನು.
ಲಂಚದ ಬಾಬ್ತಾಗಿ ಮೊದಲನೇ ಕಂತು 20 ಸಾವಿರ ರೂ. ಲಂಚವನ್ನ ಮುರುಗೇಶ್ ಸತೀಶ್ ನಿಂದ ಪಡೆದಿದ್ದನು. ಎರಡನೇ ಕಂತಾಗಿ ಇಂದು 30 ಸಾವಿರ ರೂ ಲಂಚವನ್ನ ಪಡೆಯುವಾಗ ಮುರುಗೇಶ್ ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದಾನೆ.
ಕಾರ್ಯಾಚರಣೆಯಲ್ಲಿ ಪೂರ್ವವಲಯ ದಾವಣಗೆರೆಯ ಪೊಲೀಸ್ ಅಧೀಕ್ಷಕರಾದ ಶ್ರೀ ಜಯಪ್ರಕಾಶ್ರವರ ಮಾರ್ಗದರ್ಶನದಲ್ಲಿ ಮತ್ತು ಶಿವಮೊಗ್ಗ ಭ್ರಷ್ಟಾಚಾರ ನಿಗ್ರಹದಳದ ಡಿವೈಎಸ್ಪಿ ಜೆ. ಲೋಕೇಶ, ಇವರ ನೇತೃತ್ವದಲ್ಲಿ ನಡೆದಿದೆ.
ತಂಡದಲ್ಲಿ ಡಿವೈಎಸ್ಪಿ, ಜೆ. ಲೋಕೇಶ, ಮತ್ತು ಶ್ರೀ ಇಮ್ರಾನ್ ಬೇಗ್, (ತನಿಖಾಧಿಕಾರಿ) ಪೊಲೀಸ್ ಇನ್ಸ್ಪೆಕ್ಟರ್, ಹಾಗೂ ಪೊಲೀಸ್ ಸಿಬ್ಬಂದಿಗಳಾದ ವಸಂತ ಕಾಯಕದ, ನಾಗರಾಜ, ರಘುನಾಯ್ಕ, ಸುರೇಂದ್ರ, ಅರುಣ್ಪವಾರ್, ಯೋಗೇಶ್ವರಪ್ಪ, ಚರಣ್ರಾಜ್, ಇವರುಗಳು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು. ಆರೋಪಿಯನ್ನು ದಸ್ತಗಿರಿ ಮಾಡಿ, ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ತನಿಖೆ ಮುಂದುವರೆದಿದೆ
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇