ಮೈಸೂರು ವಿಶ್ವವಿದ್ಯಾಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ಗೆ ಮರಣೋತ್ತರಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದ್ದು, ಪುನೀತ್ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಸ್ವೀಕರಿಸಿದ್ದಾರೆ.
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
ಪುನೀತ್ ಅವರ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಮೂರು ಜನ ಸಾಧಕರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ. ಅದರಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ನಿಧನರಾದ ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಗೌರವ ಡಾಕ್ಟರೇಟ್ ಅನ್ನು ಪ್ರದಾನ ಮಾಡಲಾಗಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು.
ಕ್ರಾಫರ್ಡ್ ಹಾಲ್ನಲ್ಲಿ ನಡೆದ ಘಟಿಕೋತ್ಸವದಲ್ಲಿ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡುವ ಮುನ್ನ ಅವರ ಬಾಲ್ಯದ ಕೆಲವು ನೆನಪುಗಳನ್ನು ಎಲ್ಇಡಿ ಸ್ಕ್ರೀನ್ ನಲ್ಲಿ ಪ್ರದರ್ಶಿಸಲಾಯಿತು. ಡಾಕ್ಟರೇಟ್ ಸ್ವೀಕರಿಸಲು ಆಗಮಿಸಿದ್ದ ವೇಳೆ ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಭಾವುಕರಾದರು.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್