ಹೋಟೆಲ್ ನಲ್ಲಿ ಕಂಠಪೂರ್ತಿ ಕುಡಿದು ಊಟ ಮಾಡಿ ಬಿಲ್ ಕೇಳಿದ್ದಕ್ಕೆ ದುಷ್ಕರ್ಮಿಗಳು ಬಿಸಿ ಎಣ್ಣೆ ಎರಚಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಜನ್ನಾಪುರದ ಕಮರ್ಷಿಯಲ್ ಸ್ಟ್ರೀಟ್ ಮದ್ಯದ ಅಂಗಡಿಯಲ್ಲಿ ಮದ್ಯಪಾನ ಮಾಡಿದ ದುಷ್ಕರ್ಮಿಗಳು ಅಲ್ಲೇ ಇದ್ದ ಹೋಟೆಲ್ ಗೆ ಹೋಗಿದ್ದಾರೆ.ಕಂಠಪೂರ್ತಿ ಮದ್ಯ, ಮಾಂಸದೂಟ ಸೇವಿಸಿ ಬಿಲ್ ಕೇಳಿದಾಗ ಗಲಾಟೆ ಮಾಡಿದ್ದಾರೆ. ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯನ್ನು ಥಳಿಸಿದ್ದಲ್ಲದೆ, ಇದನ್ನು ಪ್ರಶ್ನಿಸಿದ ಮಾಲೀಕನೊಂದಿಗೆ ಜಗಳವಾಡಿದ್ದಾರೆ. ಮಾಲೀಕನ ಪರವಾಗಿ ಬಂದ ಅಡುಗೆ ಭಟ್ಟರಾದ ಮನೋಜ್ ಕುಮಾರ್ ಮೇಲೆ ಬಾಣಲೆಯಲ್ಲಿದ್ದ ಬಿಸಿ ಎಣ್ಣೆಯನ್ನು ಎರಚಿದ್ದಾರೆ. ಇದರಿಂದಾಗಿ ಮನೋಜ್ ಕುಮಾರ್ ಮುಖ ಸುಟ್ಟು ಕರಕಲಾಗಿದ್ದು, ಅವರಿಗೆ ಕಣ್ಣು ತೆರೆಯಲು ಆಗುತ್ತಿಲ್ಲ. ಕಿವಿ ಕೂಡ ಕೇಳಿಸದಂತಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುತ್ತ ಕಾಲೋನಿ ಮತ್ತು ಜಿಂಕ್ ಲೈನ್ ನಿವಾಸಿಗಳಾಗಿರುವ ಅಜಯ್, ಜಗದೀಶ್, ದೀಪು, ಯೋಗೇಶ್ ಮೊದಲಾದವರು ಗಾಂಜಾ ಸೇವನೆ ಮಾಡಿ ಇಂತಹ ಕೃತ್ಯವೆಸಗಿದ್ದಾರೆ ಎನ್ನಲಾಗಿದ್ದು, ನ್ಯೂಟನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೂವರನ್ನು ಬಂಧಿಸಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್