ಹಿಜಾಬ್ ಇಸ್ಲಾಂನ ಅತ್ಯಗತ್ಯವಾದ ಭಾಗವಲ್ಲ ಎಂದು ಹೈಕೋರ್ಟ್ ಹೇಳಿದ್ದು, ಈ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ಕಾನೂನು ಬದ್ಧವಾಗಿಯೇ ಇದೆ ಎಂದಿದೆ.
ಅಲ್ಲದೆ ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನಿಸುವಂತಿಲ್ಲ .ಹಿಜಬ್ ಗೆ ಅವಕಾಶ ಕೋರಿದ್ದ ಎಲ್ಲಾ ರಿಟ್ ಅರ್ಜಿಗಳನ್ನ ವಜಾ ಮಾಡಿದೆ.
ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಉಡುಪಿಯ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಝಿ ಅವರನ್ನೊಳಗೊಂಡ ಹೈಕೋರ್ಟ್ನ ಪೂರ್ಣ ಪೀಠ ಈ ತೀರ್ಪನ್ನು ಪ್ರಕಟಿಸಿದೆ.
ತೀರ್ಪಿನಲ್ಲಿ ಏನಿದೆ?
ಕೆಲವು ಪ್ರಶ್ನೆಗಳನ್ನು ನಾವು ರಚಿಸಿದ್ದೇವೆ ಮತ್ತು ಉತ್ತರವನ್ನು ಕೂಡ ನಾವು ಹೇಳಿದ್ದೇವೆ ಎಂದು ಸಿಜೆ ಹೇಳಿದ್ದಾರೆ.
ಹಿಜಾಬ್ ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ- ಹೈಕೋರ್ಟ್
ಸರಕಾರದ ವಸ್ತ್ರಸಂಹಿತೆ ಪ್ರಶ್ನೆ ಮಾಡುವಂತಿಲ್ಲ. ಸರಕಾರದ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್