ರಬ್ಬರ್ ಕಾಡಿನಲ್ಲಿರುವ ಮನೆಯೊಂದರಲ್ಲಿ ಲಕ್ಷಾಂತರ ರೂ ಮೌಲ್ಯದ ನಗದು ಮತ್ತು 134 ಗ್ರಾಂನ ಚಿನ್ನ ಆಭರಣ ಗಳನ್ನ ಕಳವು ಮಾಡಿರುವ ಆರೋಪಿಯನ್ನ ಬಂಧಿಸಿ ಕಳವು ಮಾಡಿದ ನಗದು ಮತ್ತು ಚಿನ್ನಾಭರವಣವನ್ನು ವಶಪಡಿಸಿಕೊಳ್ಳಲಾಗಿದೆ.
ಜ.13 ರಂದು ಭದ್ರಾವತಿ ಬಳಿಯ ರಬ್ಬರ್ ಕಾಡಿನ ನಿವಾಸಿ ಪದ್ಮಾ ಎಂಬುವವರ ಮನೆಯಲ್ಲಿ ಮಧ್ಯಾಹ್ನ ಯಾರೂ ಇಲ್ಲದ ಸಮಯದಲ್ಲಿ 6 ಲಕ್ಷ ನಗದು ಮತ್ತು 5.66 ಲಕ್ಷ ರೂ ಮೌಲ್ಯದ 134.44 ಗ್ರಾಂ ಚಿನ್ನಾಭರಣವನ್ನ ಕಳವು ಮಾಡಲಾಗಿತ್ತು. 6 ಲಕ್ಷ ಹಣವನ್ನ ಪದ್ಮಾ ರವರು ಮನೆ ಕಟ್ಟುವ ಉದ್ದೇಶದಿಂದ ತಂದಿಟ್ಟಿದ್ದರು.
ಪ್ರಕರಣವನ್ನ ದಾಖಲಿಸಿಕೊಂಡ ಪೇಪರ್ ಟೌನ್ ಪೊಲೀಸರು ಪ್ರಕರಣ ಬೆನ್ನುಹತ್ತಿದ್ದರು. ರಬ್ಬರ್ ಕಾಡು ಗ್ರಾಮದ 27 ವರ್ಷದ ವ್ಯಕ್ತಿ ಚೇತನ್ ಎಂಬುವರನ್ನು ಬಂಧಿಸಿ 5,60,000/- ನಗದು ಹಣ ಹಾಗೂ ರೂ 6,43,000/- ಅಂದಾಜು ಮೌಲ್ಯದ ಒಟ್ಟು 134.44 ಗ್ರಾಂ ತೂಕದ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಪ್ರಕರಣದ ಪತ್ತೆಗಾಗಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಐಪಿಎಸ್ ಪೊಲೀಸ್ ಅಧೀಕ್ಷಕರು ಮತ್ತು ವಿಕ್ರಮ್ ಅಮಟೆ ಕೆಎಸ್ಪಿಎಸ್ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರುಗಳ ಹಾಗು ಉಮೇಶ್ ಈಶ್ವರ್ ನಾಯಕ್, ಪೊಲೀಸ್ ಉಪಾಧೀಕ್ಷಕರು ಭದ್ರಾವತಿ ಉಪವಿಭಾಗ ಮಾರ್ಗದರ್ಶನದಲ್ಲಿ ಪೇಪರ್ ಟೌನ್ ಪೊಲೀಸ್ ಠಾಣೆಯ ಮಂಜುನಾಥ, ಇ.ಓ. ಪೊಲೀಸ್ ಇನ್ಸ್ ಪೆಕ್ಟರ್, ಶಿಲ್ಪಾ ನಾಯನೇಗಲಿ ಪಿ.ಎಸ್.ಐ. ರವರ ನೇತೃತ್ವದಲ್ಲಿ ಸಿಬ್ಬಂದಿಗಳಾದ, ಆರ್. ರತ್ನಾಕರ ಎಎಸ್ಐ, ಚಿನ್ನ ನಾಯ್ಕ, ಕಾಳಾನಾಯ್ಕ, ಹಣಮಂತ ಅವಟಿ, ರಾಜೇಶ ವಿಕ್ರಮ್, ಮೋಹನ್, ನಾಗರಾಜ, ಹಾಗು ರಾಜಣ್ಣ ರವರನ್ನೊಳಗೊಂಡ ತಂಡವು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್