w
Headlines
Home » ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಹರ್ಷ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಜಿಲ್ಲಾ ಕಾಂಗ್ರೆಸ್ ನಾಯಕರುಗಳು: ಇಂತಹ ನೀಚ ಕೃತ್ಯಗಳನ್ನು ಎಸಗುವವರನ್ನು ಮರಣದಂಡನೆಗೆ ಗುರಿಪಡಿಸಿ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು !!!

ಇತ್ತೀಚೆಗೆ  ಶಿವಮೊಗ್ಗದಲ್ಲಿ ಹತ್ಯೆಯಾದ ಹರ್ಷ ಮನೆಗೆ ಭೇಟಿ ನೀಡಿದ ಜಿಲ್ಲಾ ಕಾಂಗ್ರೆಸ್ ಮುಖಂಡರುಗಳು ಹರ್ಷ ರವರ ಕುಟುಂಬಕ್ಕೆ ಸಾಂತ್ವನ ಹೇಳಿದರು 
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಕೊಲೆ ಮಾಡುವಂತಹ ವ್ಯಕ್ತಿಗಳು ಯಾವುದೇ ಜಾತಿ ಧರ್ಮದವರಾಗಿರಲಿ  ಅಂಥವರಿಗೆ ಶಿಕ್ಷೆಯನ್ನು ನೀಡಬೇಕು.
ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದೆ.ಅವರ ಅಕ್ಕ ಹಾಗೂ ತಂಗಿ ಮತ್ತು ತಾಯಿಯ ನೋವು ನಿಜಕ್ಕೂ ಮನ ಕಲಕುವಂತಿದೆ.ಇಂತಹ ಘಟನೆಗಳು ಮರುಕಳಿಸಬಾರದು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ವಹಿಸಬೇಕು.
ಇಂತಹ ಕೆಟ್ಟ ನೀಚ ಮನಸ್ಸಿನ ಕೊಲೆಗಾರರನ್ನು ಸರ್ಕಾರ ಬಿಡಬಾರದು ಈಗಿನ ಬಿಜೆಪಿ ಸರ್ಕಾರ ಇದೆ ಅವರು ಯಾವ ರೀತಿ ಕ್ರಮ ಕೈಗೊಂಡರು ಒಳ್ಳೆಯದು ಇಂತಹ ಕೊಲೆಗಡುಕರನ್ನು ಮರಣದಂಡನೆಗೆ ಗುರಿಪಡಿಸಿ ಎಂದು ಬೇಳೂರು  ಹೇಳಿದರು.
ಈ ಘಟನೆಯಿಂದ ಹೋಟೆಲ್ ಮಾಲೀಕರು ಹಾಗೂ ಸಣ್ಣಪುಟ್ಟ ವ್ಯಾಪಾರಿಗಳು ಸಹ ಸಾಕಷ್ಟು ತೊಂದರೆಯಾಗುತ್ತಿದೆ.ರಕ್ಷಣಾ ಇಲಾಖೆ ಗಮನ ಹರಿಸಿ ಎಲ್ಲರಿಗೂ ರಕ್ಷಣೆ ನೀಡಲು ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸುಂದರೇಶ್ ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರ್ ಹಾಗೂ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇👇👇

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.