ಭದ್ರಾವತಿ ನಗರದಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿ : ಶಾಲೆಗಳಿಗೆ ರಜೆ ಘೋಷಣೆ

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು 
ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ರವರು ಆದೇಶ ಹೊರಡಿಸಿದ್ದಾರೆ.

ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು ಮುಚ್ಚಬೇಕು, ಚಲನಚಿತ್ರ ಪ್ರದರ್ಶನ ನಿಷೇಧಿಸಲಾಗಿದೆ.

ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಫೆ.21ರಂದು 1 ರಿಂದ 10 ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷಗಳನ್ನು ಕೂಡ ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಪ್ರದೀಪ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *