ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ : ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !!! ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತೀ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ಬಜರಂಗದಳ ಕಾರ್ಯಕರ್ತ ಹರ್ಷ (26)ಎಂಬಾತನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. 

ಸ್ವಿಫ್ಟ್ ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹರ್ಷನನ್ನು ಭಾರತಿ ನಗರದ ರವಿವರ್ಮ ಬೀದಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ದೊಡ್ಡಪೇಟೆ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಮೃತ ಹರ್ಷ ಭಜರಂಗದಳ ಸೇರಿದಂತೆ ಹಾಗೂ ಹಿಂದೂ ಸಂಘಟನೆಯಲ್ಲಿ ಸಕ್ರಿಯ ಕಾರ್ಯಕರ್ತನಾಗಿದ್ದು,ಕೊಲೆಗೆ ಖಚಿತ ಕಾರಣ ತಿಳಿದು ಬಂದಿಲ್ಲ. ವೈಯಕ್ತಿಕ ದ್ವೇಷದ ಮೇಲೆ ಕೊಲೆ ನಡೆದಿರುವ ಸಾಧ್ಯ ಸಾಧ್ಯತೆಯ ಬಗ್ಗೆ ಪೊಲೀಸರು ತನಿಖೆ ನಂತರವೇ ಬಯಲಾಗಬೇಕಿದೆ .ಈಗಾಗಲೇ ನಗರ ಅತೀ ಸೂಕ್ಷ್ಮ ವಲಯವಾಗಿದ್ದು, ತತ್ತಕ್ಷಣ ಯಾವುದೇ ಕಿಡಿಗೇಡಿ ಕೃತ್ಯಗಳು ಜರುಗದಂತೆ ಮುನ್ನೆಚ್ಚರಿಕೆಯಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ .

ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ ; ಶಿವಮೊಗ್ಗದಲ್ಲಿ ಪರಿಸ್ಥಿತಿ ಉದ್ವಿಗ್ನ !

ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆಗೆ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗುತ್ತಿದ್ದು, ಸದ್ಯ ಬಿಗುವಿನ ವಾತಾವರಣವಿದೆ. ಸೀಗೆಹಟ್ಟಿ‌ ಭಾಗದಲ್ಲಿ ಕಲ್ಲು ತೂರಾಟ ನಡೆಯುತ್ತಿದ್ದು, ಸ್ಥಳಕ್ಕೆ ಪೂರ್ವ ವಲಯ ಡಿಐಜಿ ತ್ಯಾಗರಾಜನ್ ಹಾಗೂ ಎಸ್ಪಿ ಲಕ್ಷ್ಮಿಪ್ರಸಾದ್ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಲು ಕ್ರಮ ಕೈಗೊಂಡಿದ್ದಾರೆ. ಯಾವುದೇ ಆಹಿತಕರ ಘಟನೆ ನಡೆಯದಂತೆ ಬೇರೆ ಜಿಲ್ಲೆಗಳಿಂದಲೂ ಹೆಚ್ಚಿ‌ನ ಪೊಲೀಸ್ ಸಿಬ್ಬಂದಿ ಕರೆಯಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಮತ್ತೊಂದೆಡೆ ಕೊಲೆ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಭಜರಂಗದಳದ ಕಾರ್ಯಕರ್ತನ ಕೊಲೆ ಸುದ್ದಿ ಮಲೆನಾಡಿನಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಸ್ಥಳಕ್ಕೆ ಎಸ್ಪಿ ಲಕ್ಷ್ಮಿಪ್ರಸಾದ್ ಮತ್ತು ಡಿಸಿ ಡಾ. ಸೆಲ್ವಮಣಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಇಂದು ಶಿವಮೊಗ್ಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಲಾಗುವುದು. ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಇಂದು ಬೆಳಗಿನ ಜಾವ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಘಟನಾ ಸ್ಥಳಕ್ಕೆ ತೆರಳಿ ನಂತರ ಬಜರಂಗದಳ ಕಾರ್ಯಕರ್ತ ಹರ್ಷ ರವರ ಅಂತಿಮ ದರ್ಶನ ಪಡೆದರು.

Leave a Reply

Your email address will not be published. Required fields are marked *