ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.
ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ‘ಹರಕು ನಾಲಗೆ ಈಶ್ವರಪ್ಪ’ ಎಂದು ಬ್ಯಾನರ್ ಹಿಡಿದು ಪ್ರತಿಭಟಿಸಿದರು.