Headlines

ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ಅಪಘಾತಕ್ಕೀಡಾದ ವ್ಯಕ್ತಿಯನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.


ಇಂದು ಮಾಜಿ ಶಾಸಕರು ಸಾಗರದಿಂದ ಆನಂದಪುರ ಬರುವಾಗ ಹೊಸೂರು ಬಳಿ ರಸ್ತೆಯಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದನು.ತಕ್ಷಣ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ ಮಾಜಿ ಶಾಸಕರು ಸಹಾಯಕರ ಸಹಾಯಕ್ಕೂ ಕಾಯದೇ ತಾವೇ ಬೈಕ್ ಎತ್ತಿ ನಿಲ್ಲಿಸಿ, ಅಪಘಾತಕ್ಕೀಡಾದ ವ್ಯಕ್ತಿಗೆ ನೀರು ಕುಡಿಸಿ,ಪ್ರಥಮ ಚಿಕಿತ್ಸೆ ನೀಡಿ ನೆರವಾಗಿ ಮಾನವೀಯತೆ ಮೆರೆದಿದ್ದಾರೆ.


ಮಾಜಿ ಶಾಸಕರ ಈ ಮಾನವೀಯತೆಯ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಪ್ರಶಂಸೆಗಳು ಕೇಳಿಬರುತ್ತಿವೆ.

About The Author

Leave a Reply

Your email address will not be published. Required fields are marked *