Headlines

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ | Application

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ


ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಮೇ 20 ಕಡೆಯ ದಿನವಾಗಿರುತ್ತದೆ. ಜಿಲ್ಲೆಯ ಕ್ರೈಸ್‍ನ ಯಾವುದೇ ವಸತಿ ಶಾಲೆ/ಸರ್ಕಾರಿ/ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಲ್ಲಿ 10 ನೇ ತರಗತಿ ಅಧ್ಯಯನ ಮಾಡಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸೌಲಭ್ಯಗಳನ್ನು ನೀಡಲಾಗುವುದು. ಪ.ಜಾತಿ ಮತ್ತು ಪ.ವಘ್ದ, ಹಿಂದುಳಿದ ವರ್ಗದ ಪ್ರವರ್ಗ-1 ರ ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯದ ಮಿತಿ ರೂ.2,50,000, ಹಿಂದುಳಿದದ ವರ್ಗ 2ಎ, 2ಬಿ, 3ಎ, 3ಬಿ ಗುಂಪಿಗೆ ಸೇರಿದ ವಿದ್ಯಾರ್ಥಿಗಳ ಆದಾಯದ ಮಿತಿ ರೂ.1,00,000 ಗಳು ಇರುತ್ತದೆ.


ಅಭ್ಯರ್ಥಿಗಳು ಸಂಬಂಧಿಸಿದ ಶಾಲೆಯಿಂದ ಎಸ್‍ಎಟಿಎಸ್ ಸಂಖ್ಯೆಯನ್ನು ಪಡೆದು ಮೀಸಲಾತಿ ಇತರೆ ಮೂಲ ದಾಖಲಾತಿ ಸಹಿತ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ವಸತಿ ಶಾಲೆ/ಕಾಲೇಜಿನ ಪ್ರಾಂಶುಪಾಲರು, ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗ, ಉಪನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದೆಂದು ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *