ಶಿವಮೊಗ್ಗ : ರಾಜ್ಯದಾದ್ಯಂತ ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿರುವಂತೆಯೇ ನಗರದ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಇಂದು ಬಾಪೂಜಿ ನಗರ ಸರ್ಕಾರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ.
ವಿದ್ಯಾರ್ಥಿಗಳು ಕೇಸರಿ ಧ್ವಜವನ್ನು ಧ್ವಜಸ್ತಂಭಕ್ಕೆ ಕಟ್ಟಲು.ಮುಂದಾಗಿದ್ದಾರೆ. ಇದಕ್ಕೂ ಮುನ್ನವೇ ಕಾಲೇಜು ಕಟ್ಟಡ ಏರಿದ್ದ ಕೆಲವು ವಿದ್ಯಾರ್ಥಿಗಳು ಕಿಡಿಗೇಡಿಗಳ ಕುಮ್ಮಕ್ಕಿನಿಂದ ಮೇಲಿನಿಂದ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸದ್ಯ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ, ಡಿವೈಎಸ್ಪಿ ಅವರುಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗುತ್ತಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್