ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರಾಗಿದ್ದ ವಿನಯ್ ಗೌಡ್ರು (35) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ವಿನಯ್ ಗೌಡ್ರು 12/05/21 ರಂದು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.
ಮೃತರ ಅಂತ್ಯಕ್ರಿಯೆಯನ್ನು ಇಂದು ರಾತ್ರಿ 10 ಕ್ಕೆ ಅವರ ಸ್ವಗ್ರಾಮವಾದ ತಡಗಳಲೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.