ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ವಿದ್ಯಾರ್ಥಿಯೋರ್ವ ಕೆಳಗೆ ಬಿದ್ದ ವಿಡಿಯೋ ಈಗ ವೈರಲ್ ಆಗಿದೆ.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣದಿಂದ ಹೊರಟ ಬಸ್ಸನ್ನು ಓಡಿ ಹೋಗಿ ಹತ್ತಲು ವಿದ್ಯಾರ್ಥಿ ಯತ್ನಿಸಿದ್ದಾನೆ.
ಆದರೆ ಬಸ್ಸು ಸ್ಪೀಡ್ ಇದ್ದಿದ್ದರಿಂದ ವಿದ್ಯಾರ್ಥಿಗೆ ಹತ್ತಲು ಸಾಧ್ಯವಾಗದೆ ಕೆಳಗೆ ಬಿದ್ದಿದ್ದಾನೆ. ಕಾರ್ಗಲ್ ನ ಇಡುವಾಣಿಯ ಚಿಪ್ಪಲಮಕ್ಕಿಯ ಒಂಭತ್ತನೇ ತರಗತಿ ವಿದ್ಯಾರ್ಥಿ ವೈಭವ್ ಎಂಬಾತ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ.
ಶಾಲಾ ಬ್ಯಾಗ್ ಬೆನ್ನಿಗೆ ಹಾಕಿಕೊಂಡಿದ್ದಿಂದ ಅಂಗಾತ ಬಿದ್ದ ವಿದ್ಯಾರ್ಥಿಗೆ ಯಾವುದೇ ಗಾಯಗಳಾಗಿಲ್ಲ. ಹಿಂಬದಿಯಿಂದ ಯಾವ ವಾಹನವೂ ಬಾರದೆ ಇರುವುದರಿಂದ ಹುಡುಗ ಬಚಾವ್ ಆಗಿದ್ದಾನೆ. ಶಾಲೆಯ ಬ್ಯಾಗ್ ವಿದ್ಯಾರ್ಥಿಯನ್ನು ಬದುಕಿಸಿದೆ ಅಂತನೇ ಹೇಳಬಹುದು.
ವಿದ್ಯಾರ್ಥಿ ಬಸ್ ಗೆ ಹತ್ತಲು ಹೋಗಿ ಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್