Headlines

ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ :

ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜತೆ ಬಿದರಹಳ್ಳಿಯ ತನ್ನ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಹೊಸನಗರ ತಾಲೂಕಿನ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಮಗಳು ತನ್ವಿ(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುರುವಾರ ಬೆಳಗಿನ ಜಾವ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ.ಇಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ.


ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.

ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

About The Author

Leave a Reply

Your email address will not be published. Required fields are marked *