ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಫರ್ಡ್ ಚರ್ಚ್ ಬಳಿ ಚಲಿಸುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂಭಾಗದ ಎರಡು ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತಿದ್ದ ಎರಡು ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ರಿಪ್ಪನ್ ಪೇಟೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ಮಾರುತಿ ಬ್ರೀಜಾ ಕಾರಿನ ಮುಂದಿನ ಎರಡು ಟೈರ್ ಸ್ಪೋಟಗೊಂಡ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ ಎದುರುಗಡೆಯಿಂದ ಬರುತ್ತಿದ್ದ ಬರುವೆ ಗ್ರಾಮದ ನಿವಾಸಿ ತಿಮ್ಮಪ್ಪ (40) ಇವರ ಬಜಾಜ್ ಡಿಸ್ಕವರ್ ಬೈಕ್ ಗೆ ಹಾಗೂ ಗುಡ್ ಶಫರ್ಡ್ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದಿದ್ದ ಕೆಂಚನಾಲ ನಿವಾಸಿ ಅನ್ಸರ್ (42) ಟಿವಿಎಸ್ ಸ್ಪೋರ್ಟ್ಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಬೈಕ್ ಸವಾರರಿಗೆ ತೀವ್ರವಾದ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.
ಬರುವೆ ಗ್ರಾಮದ ತಿಮ್ಮಪ್ಪ ಎಂಬುವವರಿಗೆ ತಲೆಗೆ ತೀವ್ರವಾದ ಪೆಟ್ಟಾಗಿದೆ ಹಾಗೂ ಕೆಂಚನಾಲ ನಿವಾಸಿ ಅನ್ಸರ್ ರವರ ಬಲಗಾಲಿಗೆ ತೀವ್ರ ಪೆಟ್ಟಾಗಿದೆ ಎಂದು ತಿಳಿದು ಬಂದಿದೆ.
ರಿಪ್ಪನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವೀಡಿಯೋ ಇಲ್ಲಿ ವೀಕ್ಷಿಸಿ 👇👇👇👇👇 :::
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್