ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್-19 ರಿಂದ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸುವಂತೆ ಆರ್ಥಿಕ ಸಹಾಯ ಮಾಡಲು ಆದಿತ್ಯ ಬಿರ್ಲಾ ಕ್ಯಾಪಿಟಲ್ ಫೌಂಡೇಷನ್ ವತಿಯಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಕೋವಿಡ್ ವಿದ್ಯಾರ್ಥಿವೇತನ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಿದೆ.
1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ರೂ. 24 ಸಾವಿರಗಳು, 9 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ರೂ. 30 ಸಾವಿರಗಳು, ವೃತ್ತಿಪರ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರೂ. 60 ಸಾವಿರಗಳು ಹಾಗೂ ಸಾಮಾನ್ಯ ವೃತ್ತಿಪರ ಪದವಿಪೂರ್ವ ವಿದ್ಯಾರ್ಥಿಗಳಿಗೆ ರೂ. 36 ಸಾವಿರಗಳ ಆರ್ಥಿಕ ಧನ ಸಹಾಯ ನೀಡಲಾಗುತ್ತಿದ್ದು,
ಆರ್ಹರು : http://www.buddy4study.com/page/aditya-birla-capital-covid-schoarship-programme ವೆಬ್ ಸೈಟ್ ಮೂಲಕ 31/01/2022 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಉಪನಿದೇರ್ಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, 100 ಅಡಿ ರಸ್ತೆ, ಆಲ್ಕೊಳ, ಶಿವಮೊಗ್ಗ. ದೂ.ಸಂ.: 08182-295709 ನ್ನು ಸಂಪರ್ಕಿಸುವುದು.
ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಬಳಸಿ :
http://www.buddy4study.com/page/aditya-birla-capital-covid-schoarship-programme
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್