ಪುರುದಾಳು ಗ್ರಾಮದ ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿ ಪೆಸಿಟ್ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತ ಪಟ್ಟಿದ್ದಾನೆ.
ಅತಿವೇಗ ಮತ್ತು ಅಜಾಗರೂಕತೆಯಿಂದ ಬೈಕ್ ಚಲಾಯಿಸಿದ್ದರ ಪರಿಣಾಮ ಬೈಕ್ ನಿಂದ ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸುಧನ್ವ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ತಾಲೂಕಿನ ಸುಧನ್ವ ಎಂಬ 21 ವರ್ಷದ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಪುರುದಾಳು ಗ್ರಾಮದಿಂದ ಶಿವಮೊಗ್ಗಕ್ಕೆ ಬೈಕ್ ನಲ್ಲಿ ತೆರಳಿದ್ದಾರೆ.
ಫಾರೆಸ್ಟ್ ಚೆಕ್ ಪೋಸ್ಟ್ ಬಳಿ ಸ್ನೇಹಿತ ಮನೋಜ್ ಮತ್ತು ಸುಧನ್ವ ಬರುತ್ತಿದ್ದ ಬೈಕ್ ಕೆ ಎ 14 ಇವಿ 6602 ಚಾಲಕನ ನಿಯಂತ್ರಣ ತಪ್ಪಿದ ಕಾರಣ ಅಪಘಾತವಾಗಿದೆ. ಸ್ನೇಹಿತ ಮನೋಜ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಧನ್ವನಿಗೆ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿದ್ದ ಕಾರಣ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಆದರೆ ಸುಧನ್ವ ನನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಸುಧನ್ವ ಪೆಸಿಟ್ ಕಾಲೇಜಿನ ಅಂತಿಮ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು ವಿವೇಕಾನಂದ ಬಡಾವಣೆಯಲ್ಲಿ ವಾಸವಿದ್ದನು ಎಂದು ತಿಳಿದು ಬಂದಿದೆ.
ಪ್ರಕರಣದ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್