ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಇರುವಕ್ಕಿಯ ಇಂದಿರಾ ಗಾಂಧಿ ವಸತಿ ಶಾಲೆಯ ನಲವತ್ತು ಮಕ್ಕಳಿಗೆ ಇದೀಗ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.
ಮೊನ್ನೆ ಹಲವು ವಿದ್ಯಾರ್ಥಿಗಳಿಗೆ ರೋಗದ ಲಕ್ಷಣ ಕಂಡು ಬಂದ ಹಿನ್ನೆಲೆಯಲ್ಲಿ 80 ಮಕ್ಕಳ ಕೋವಿಡ್ ಪರೀಕ್ಷೆಯನ್ನು ನಡೆಸಲಾಗಿತ್ತು.
ಇವತ್ತು ಬಂದ ವರದಿಯಲ್ಲಿ 40 ಮಕ್ಕಳಿಗೆ ಇದೀಗ ಕೋರನ ಪಾಸಿಟಿವ್ ದೃಢಪಟ್ಟಿದೆ.
ಸ್ಥಳಕ್ಕೆ ಸಾಗರ ತಾಲ್ಲೂಕು ವೈದ್ಯಾಧಿಕಾರಿ ಮೋಹನ್ ರವರು ಭೇಟಿ ನೀಡಿ ಈ ವಿದ್ಯಾರ್ಥಿಗಳಿಗೆ ಬೇರೆ ರೂಮಿನ ವ್ಯವಸ್ಥೆ ಮಾಡಿದ್ದು ಹಾಗೂ ಪ್ರತಿನಿತ್ಯ ಇವರನ್ನು ನೋಡಿಕೊಳ್ಳಲು ಒಬ್ಬ ವೈದ್ಯರನ್ನು ಸಹ ನೇಮಿಸಿದ್ದಾರೆ.ಅಚ್ಚರಿಯೆಂದರೆ 40 ರಲ್ಲಿ 36 ಮಕ್ಕಳಿಗೆ ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ಕೋವಿಡ್ ಪಾಸಿಟಿವ್ ಬಂದಿರುವುದು ನಿಜಕ್ಕೂ ಆಶ್ಚರ್ಯಕರವಾಗಿದೆ.
ಒಟ್ಟಾರೆಯಾಗಿ ಇದೀಗ ಇರುವಕ್ಕಿಯ ಇಂದಿರಾಗಾಂಧಿ ವಸತಿ ಶಾಲೆಯನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಲಾಗಿದೆ ಎಂದು ಪೋಸ್ಟ್ ಮನ್ ನ್ಯೂಸ್ ಸಂಸ್ಥೆಗೆ ಸಾಗರ
THO ಮಾಹಿತಿ ನೀಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್