ತೀರ್ಥಹಳ್ಳಿ : ವ್ಯವಹಾರದಲ್ಲಿ ನಷ್ಟ ಅನುಭವಿಸಿ ಮನನೊಂದ ದಂಪತಿಗಳಿಬ್ಬರೂ ನೇಣಿಗೆ ಕೊರಳು ಒಡ್ಡಿದ ದುರಂತ ಘಟನೆ ತಾಲ್ಲೂಕಿನ ಸಂತೆಹಕ್ಲು ಸಮೀಪದ ಪೂರಲುಕೊಪ್ಪದಲ್ಲಿ ನಡೆದಿದೆ.
ಸಂತೆಹಕ್ಲು ಸಮೀಪದ ಮಂಜುನಾಥ್ (46) ಮತ್ತು ಉಷಾ (43) ನೇಣಿಗೆ ಶರಣಾದ ದಂಪತಿಗಳಾಗಿದ್ದು, ಇವರಿಗೆ ಇಬ್ಬರು ಪುತ್ರರಿದ್ದಾರೆ.
ಸುಮಾರು 2 ಎಕರೆ ಜಮೀನು ಇದ್ದು ಸಣ್ಣ ಕೃಷಿಕರಾಗಿದ್ದಾರೆ, ಹಲವು ಕೃಷಿ ಮತ್ತು ಮಕ್ಕಳ ವಿದ್ಯಾಭ್ಯಾಸಕ್ಕೆ ಹಲವು ಕಡೆ ಸಾಲವನ್ನು ಮಾಡಿಕೊಂಡಿದ್ದು ಕೊರೊನಾ ಹಿನ್ನೆಲೆಯಲ್ಲಿ ಅವರಿಗೆ ಅದನ್ನು ನಿರ್ವಹಣೆ ಮಾಡಲು ಕಷ್ಟವಾಗಿತ್ತು. ಇದರಿಂದ ಮನನೊಂದ ದಂಪತಿಗಳಿಬ್ಬರು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.