ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

 ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ  ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. 
ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯಂತೆ ಪಾದಯಾತ್ರೆಯನ್ನು ನಿಲ್ಲಿಸಿದ ನಾಯಕರು  ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರಿಸುವಂತೆ ತೀರ್ಮಾನಿಸಿದ್ದಾರೆ. 
ಸಭೆ ಬಳಿಕ ಸುದ್ದಿಗೋಷ್ಠಿಯ್ಕಲ್ಲಿ ಮಾತನಾತಾಡಿದ ಸಿದ್ದರಾಮಯ್ಯ, ಇವತ್ತಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು, ಇಷ್ಟು ದಿನ ಪಾದಯಾತ್ರೆಗೆ ಅಭೂತ ಪೂರ್ವ ಯಶಸ್ಸನ್ನು ತಂದಿದ್ದೀರಿ. ರಾಜ್ಯದಲ್ಲಿ ಕೊರೋನ ಹೆಚ್ಚಾಗಲು ಬಿಜೆಪಿಯೇ ಕಾರಣ ಹೊರತು ಕಾಂಗ್ರೆಸ್ ಅಲ್ಲ ಎಂದು ತಿಳಿಸಿದರು.
ಪಾದಯಾತ್ರೆ ಕುರಿತು ಹೈಕೋರ್ಟ್ ರಾಜ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಬೆನ್ನಲ್ಲೇ ಪಾದಯಾತ್ರೆಗೆ ಸರಕಾರ ನಿರ್ಬಂಧ ವಿಧಿಸಿತ್ತು. 
ಜನರ ಹಿತ ದೃಷ್ಟಿಯಿಂದ ನಾವು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತೇವೆ, ಕೋವಿಡ್ ಪ್ರಕರಣಗಳು ಕಡಿಮೆಯಾದ ಬಳಿಕ ಮತ್ತೆ ಪಾದಯಾತ್ರೆಯನ್ನು ಮುಂದುವರಿಸುತ್ತೇವೆ ಎಂದು ಅವರು ಹೇಳಿದರು. 

Leave a Reply

Your email address will not be published. Required fields are marked *