w
Headlines
Home » ರಿಪ್ಪನ್ ಪೇಟೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ರಿಪ್ಪನ್ ಪೇಟೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.
ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದಿದೆ.ವಿದ್ಯಾರ್ಥಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಲೇಜಿನ 2nd ಬಿಕಾಂ ನ ಎಲ್ಲಾ ವಿದ್ಯಾರ್ಥಿಗಳ ಸ್ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದೆ. 
ಕೂಡಲೇ ಎಚ್ಚೆತ್ತುಕೊಂಡ ಕಾಲೇಜಿನ ಆಡಳಿತ ವರ್ಗ ದ್ವಿತೀಯ ಬಿಕಾಂ ತರಗತಿಯಲ್ಲಿ ಇದ್ದ ಎಲ್ಲಾ ವಿದ್ಯಾರ್ಥಿಗಳ ಸ್ವ್ಯಾಬ್ ಪರೀಕ್ಷೆ ನಡೆಸಿ,ಸೋಮವಾರದವರೆಗೂ ರಜೆ ಘೋಷಿಸಲಾಗಿದೆ.ಹಾಗೇಯೆ ಸೋಮವಾರದ ನಂತರ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಡಬಲ್ ಡೋಸ್ ಸರ್ಟಿಫಿಕೇಟ್ ತರುವಂತೆ ಕಾಲೇಜಿನ ಪ್ರಾಂಶುಪಾಲರು ಆದೇಶಿಸಿದ್ದಾರೆ.
ಈ ಘಟನೆಯಿಂದ ರಿಪ್ಪನ್ ಪೇಟೆಯ ಜನತೆ ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕದ ಛಾಯೆ ಮೂಡಿದೆ.ಮುಂದೆ ನಡೆಯುವ ಅನಾಹುತಗಳಿಗೆ ಸಂಬಂಧಪಟ್ಟ ಇಲಾಖೆಯವರು ಹೊಣೆಯಾಗಬೇಕು ಆಗುವುದು ಅನಿವಾರ್ಯವಾಗಿದೆ.
ಇನ್ನಾದರೂ ಎಚ್ಚೆತ್ತುಕೊಂಡು ಈಗ ಕರೊನಾ ಪಾಸಿಟಿವ್ ಬಂದಿರುವ ವಿದ್ಯಾರ್ಥಿಗೆ ಸರಿಯಾದ ಚಿಕಿತ್ಸೆ ನೀಡಿ ಹಾಗೂ ಇನ್ನುಳಿದ ವಿದ್ಯಾರ್ಥಿಗಳಿಗೆ ಬರದಂತೆ ಮುಂಜಾಗ್ರತಾ ಕ್ರಮ ವಹಿಸದೆ ಇದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವುದರಲ್ಲಿ ಯಾವುದೇ ಸಂದೇಹವಿಲ್ಲ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.