ಶಿವಮೊಗ್ಗ : ಶಾಲೆಗೆ ಹೊರಟ್ಟಿದ್ದ ವಿದ್ಯಾರ್ಥಿ ಯನ್ನು ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.
ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರು ಗ್ರಾಮದಲ್ಲಿನ ಹಳ್ಳಿಮನೆ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ 15 ವರ್ಷದ ಮಗಳನ್ನು ಅದೇ ಹೋಟೆಲ್ ನಲ್ಲಿ ಸಪ್ಲೈರ್ ಆಗಿ ಕೆಲಸ ಮಾಡುತ್ತಿದ್ದ ನಿದಿಗೆ ಗ್ರಾಮದ ಉಮೇಶ್, ( 28), ಬಾಲಕಿಯನ್ನು ಪರಿಚಯಮಾಡಿಕೊಂಡು ತುಂಬಾ ಸಲುಗೆಯಿಂದ ಮಾತನಾಡುತ್ತಿದ್ದನು.
ನಿನ್ನೆ ಬಾಲಕಿ ಶಾಲೆಗೆ ಹೋಗಲು ಹೊರಟಿದ್ದಾಗ ಬಾರಂದೂರಿನಿಂದ ತರೀಕೆರೆಗೆ ಹೋಗುವ ಬಸ್ ನಲ್ಲಿ ಕೂರಿಸಿಕೊಂಡು ಲಾಡ್ಜ್ ಗೆ ಕರೆದುಕೊಂಡು ಹೋಗಿ, ಬಾಲಕಿಯ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆ.ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ.
ಘಟನೆ ಸಂಬಂಧ ಭದ್ರಾವತಿಯ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್