ತೀರ್ಥಹಳ್ಳಿ : ತಾಲೂಕಿನ ಅರಳಸುರುಳಿ ಗ್ರಾಮದ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಷ್ರಷ್ಟಿ ಪ್ರಯುಕ್ತ ಜಾತ್ರಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಗೃಹಸಚಿವರ ಸ್ವಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೋವಿಡ್ ನಿಯಮವನ್ನು ಉಲ್ಲಂಘಿಸಿ ಜಾತ್ರಾ ಮಹೋತ್ಸವಕ್ಕೆ ಸಹಕರಿಸಿದ್ದಾರೆ. ರಾಜ್ಯ ಸರ್ಕಾರದ ಕೊರೋನಾ ನಿಯಮಗಳನ್ನು ಗೃಹ ಸಚಿವರ ಕ್ಷೇತ್ರದ ಅಧಿಕಾರಿಗಳು ಗಾಳಿಗೆ ತೂರಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ.
ಈ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಕೋವಿಡ್ ಮುಂಜಾಗೃತ ಕ್ರಮವಾಗಿ ಸಾಮಾಜಿಕ ಅಂತರ ಕಾಪಾಡದೇ ಮಾಸ್ಕ್ ಧರಿಸದೆ ಜಾತ್ರೆಯ ಖರೀದಿಯ ಭರಾಟೆಯಲ್ಲಿ ತಲ್ಲೀನರಾಗಿದ್ದರು. ಅರಳಸುರುಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿತರು ಇದ್ದರೂ ಕೂಡ ಬೇಜವಾಬ್ದಾರಿತನ ತೋರುತ್ತಿದ್ದಾರೆ.
ರಾಜ್ಯದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ಗೃಹ ಸಚಿವರ ಸ್ವಕ್ಷೇತ್ರದಲ್ಲಿ ಸರ್ಕಾರದ ಕಾನೂನುಗಳಿಗೆ ನಯಪೈಸೆಯ ಕಿಮ್ಮತ್ತಿಲ್ಲ ಎಂದು ಮೇಲ್ನೋಟಕ್ಕೆ ಸಾಬೀತಾಗುತ್ತಿದೆ.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್