ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಉದ್ಯಮದಲ್ಲೇ ಹೊಸ ಅಲೆಯನ್ನೇ ಎಬ್ಬಿಸಿದಂತಹ ಖ್ಯಾತ ಉದ್ಯಮಿ, ಅಂಕಣಕಾರ, ಲೇಖಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ, ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆಗೊಳಿಸಲಾಯಿತು.
ಕಥಾ ಪುಸ್ತಕವಾದ ” ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ” ಪುಸ್ತಕವನ್ನು ಖ್ಯಾತ ಜಲತಜ್ಞ ಶಿವಾನಂದ ಕಳವೆ ಬಿಡುಗಡೆ ಮಾಡಿದರು.
ಇನ್ನೂ ಈ ಪುಸ್ತಕದಲ್ಲಿ ಆನಂದಪುರ ಕೇಂದ್ರವಾಗಿಸಿ ಗ್ರಾಮೀಣ ಬದುಕಿನ ಅನುಭವವನ್ನು ಕಥಾ ರೂಪದಲ್ಲಿ ಬರೆದಿದ್ದಾರೆ ಈ ಪುಸ್ತಕದ ಕಥೆಗಳು ಆಕರ್ಷಕವಾಗಿದ್ದು ಸರಳ ನಿರೂಪಣೆ ಹೊಂದಿದ್ದು ಕುತೂಹಲಕಾರಿ ತಿರುವಿನ ಘಟನೆ ಇದೆ ಎಂದು ತಿಳಿಸಿದ್ದಾರೆ.
ಇನ್ನೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪತ್ರಕರ್ತರಾದ ಶೃಂಗೇಶ್, ಪ್ರಕಾಶ್ ಕುಗ್ವೆ ,ಶಿವಾನಂದ ಕಳವೆ,ನಾಗರಾಜ್ ತೋಂಬ್ರಿ ,ರೇವಣಪ್ಪ , ಕೆ, ನಾಗರಾಜ್ ಹಾಗೂ ಆನಂದಪುರದ ಸ್ಥಳೀಯ ಪತ್ರಕರ್ತರಿದ್ದರು.
ಇನ್ನೂ ಈ ಪುಸ್ತಕವು ಶಿವಮೊಗ್ಗದ ಡಯಾನಾ ಬುಕ್ ಹೌಸ್ ನಲ್ಲಿ
ಸಾಗರದ ರವೀಂದ್ರ ಪುಸ್ತಕಾಲಯ ದಲ್ಲಿ ಹಾಗೂ ಸಾಗರದ ಶ್ರೀ ಟ್ರೇಡರ್ಸ್ ಹಾಗೂ ಯಡೆಹಳ್ಳಿಯ ಮಲ್ಲಿಕಾ ವೆಜ್ ಹೋಟೆಲ್ ನಲ್ಲಿ ಸಿಗುತ್ತದೆಂದು ಬರಹಗಾರರಾದ ಕೆ, ಅರುಣ್ ಪ್ರಸಾದ್ ರವರು ಮಾಹಿತಿ ನೀಡಿದ್ದಾರೆ.
ವರದಿ : ಪವನ್ ಕುಮಾರ್ ಕಠಾರೆ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್