ರಿಪ್ಪನ್ ಪೇಟೆ : ಜನರು ಶಾಂತಿ ಮತ್ತು ನೆಮ್ಮದಿಯಿಂದ ಜೀವನ ಸಾಗಿಸಲು ಇರುವ ಕಾನೂನುನ್ನು ಪಾಲನೆ ಮಾಡುವ ಕಡೆ ಸಾರ್ವಜನಿಕರ ಗಮನ ನೀಡಬೇಕು ಎಂದು ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯ ಪಿಎಸ್‌ಐ ಶಿವಾನಂದ ಕೋಳಿ ತಿಳಿಸಿದರು.
ಬುಧವಾರ ರಿಪ್ಪನ್ ಪೇಟೆಯ ಪದವಿಪೂರ್ವ ಕಾಲೇಜಿನಲ್ಲಿ
ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಧ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿ ಮಾತನಾಡಿದರು.
ಪಟ್ಟಣದ ನಿವಾಸಿಗಳು ಮನೆಗಳನ್ನು ಬೀಗ ಹಾಕಿ ಬೇರೆಡೆಗೆ ಹೋಗುವಾಗ ಪೊಲೀಸ್ ಠಾಣೆಗೆ ಲಿಖೀತ ಪತ್ರದೊಂದಿಗೆ ಮಾಹಿತಿ ನೀಡಬೇಕು. ಇಲ್ಲವಾದರೆ ಗೃಹ ರಕ್ಷಕ ತಂತ್ರಾಂಶದಲ್ಲಿ ನಿಮ್ಮ ಮನೆಯಿರುವ ಸ್ಥಳದ ಮಾಹಿತಿಯನ್ನು ಸೇರ್ಪಡೆ ಮಾಡಬೇಕು. ಆಗ ಪೊಲೀಸ್ ಗಸ್ತು ನೀಡಲಾಗುವುದು.
ದ್ವಿಚಕ್ರ ವಾಹನಗಳನ್ನು ಚಲಾಯಿಸುವಾಗ ಸವಾರರು ತಪ್ಪದೇ ಹೆಲ್ಮಟ್ ಧರಿಸಿ.ಚಾಲನಾ ಪರವಾನಗಿಯನ್ನು ಕಡ್ಡಾಯವಾಗಿ ಹೊಂದಿರಬೇಕು,ವಿಧ್ಯಾರ್ಥಿಗಳು ರಸ್ತೆ ನಿಯಮಗಳನ್ನು ಉಲ್ಲಂಘಿಸಬಾರದು,ರಸ್ತೆಯಲ್ಲಿ ಸಂಚಸುವಾಗ ಮೊಬೈಲ್ ಬಳಸದಂತೆ ಹಾಗೂ ನಾಲ್ಕು ಚಕ್ರ ವಾಹನಗಳನ್ನು ಚಲಾಯಿಸುವ ಸವಾರರು ಕಡ್ಡಾಯವಾಗಿ ಸೀಟ್ ಬೆಲ್ಟ್ ಹಾಕಿಕೊಳ್ಳಬೇಕು. ಇದರಿಂದ ಅಪಘಾತ ಸಂಭವಿಸಿದಾಗ ಜೀವಕ್ಕೆ ಅಪಾಯ ಕಡಿಮೆ ಯಾಗುತ್ತದೆ. ಸಮಾಜದ ರಕ್ಷಣೆಗೆ ಪೊಲೀಸ್ ಇಲಾಖೆ ಸದಾ ಸನ್ನದ್ಧ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೋಲಿಸ್ ಪೇದೆಗಳಾದ ಉಮೇಶ್, ಶಿವಕುಮಾರ್,ಸಂತೋಷ್,ಮಧುಸೂಧನ್ ಎನ್, ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಗೋಪಿಕಾ,ಪ್ರೌಢಶಾಲಾ ಉಪ ಪ್ರಾಚಾರ್ಯರಾದ ರತ್ನಾಕರ ಮತ್ತು ಸಹ ಶಿಕ್ಷಕರುಗಳು,ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ:ದೇವರಾಜ್ ಆರಗ