ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಕುಕ್ಕಳಲೆ ಸಂಪರ್ಕ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಹೆಸರು ಇಡಲಾಗಿತ್ತು.ಗುರುವಾರ ತಡರಾತ್ರಿ ಕೆಲವು ದುಷ್ಕರ್ಮಿಗಳು ಪುನೀತ್ ರಾಜಕುಮಾರ್ ರವರ ನಾಮಫಲಕಕ್ಕೆ ಬಣ್ಣಹಚ್ಚಿ ವಿಕೃತಿ ಮೆರೆದಿದ್ದರು.
ಈ ಘಟನೆಯನ್ನು ಖಂಡಿಸಿ ರಿಪ್ಪನ್ ಪೇಟೆಯ ಕಸ್ತೂರಿ ಕನ್ನಡ ಸಂಘ,ಕಲಾ ಕೌಸ್ತುಭ ಸಂಘ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಅಪ್ಪು ಅಭಿಮಾನಿಗಳು ರಿಪ್ಪನ್’ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ನಂತರ ಮೆರವಣಿಗೆ ಮೂಲಕ ಪೊಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿಸಿ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ಈ ಸಂಧರ್ಭದಲ್ಲಿ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್, ಪ್ರಧಾನ ಕಾರ್ಯದರ್ಶಿ ರಮೇಶ್ ಫ಼್ಯಾನ್ಸಿ,ಕರವೇ ಜಿಲ್ಲಾಧ್ಯಕ್ಷರಾದ ಸೂಡೂರು ಶಿವಣ್ಣ,ಕರವೇ ಹೊಸನಗರ ತಾಲೂಕ್ ಅಧ್ಯಕ್ಷರಾದ ಉಲ್ಲಾಸ್,ಮುಖಂಡರಾದ ಟಿ. ಆರ್. ಕೃಷ್ಣಪ್ಪ,ಅಮೀರ್ ಹಂಜಾ,ರವೀಂದ್ರ ಕೆರೆಹಳ್ಳಿ,ದೇವರಾಜ್ ಕೆರೆಹಳ್ಳಿ,ಆರ್ ಎನ್ ಮಂಜುನಾಥ್,ಹಿರಿಯಣ್ಣ ಭಂಡಾರಿ, ವಿನಾಯಕ ಶೆಟ್ಟಿ, ರಾಘು, ಶಿವು ವೊಡಹೊಸಳ್ಳಿ, ವಿಜಿ ಮಳವಳ್ಳಿ, ಸಂದೀಪ್ ಶೆಟ್ಟಿ, ಗೋಪಿ, ಪ್ರವೀಣ್ ಲಕ್ಷ್ಮಿಕಾಂತ್, ಮಂಜು ಮಳವಳ್ಳಿ.ಮಧು ಬಿಳಕಿ ನವೀನ್, ಶ್ರೀನಿವಾಸ, ಮಂಜುನಾಥ್ ಶೆಟ್ಟಿ .ರವಿ ಆರ್ಟ್ಸ್. ಸತೀಶ್ ,ಮಂಜು,ರಾಘವೇಂದ್ರ ಗವಟೂರು ಸೇರಿದಂತೆ ಮೊದಲಾದವರಿದ್ದರು
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್‌ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್‌ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್‌ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್

- ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್