ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು.
ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು
ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ ಜಗಜ್ಯೋತಿ ಬಸವಣ್ಣನವರ ಪುತ್ಥಳಿಕೆಗೆ ಮಸಿ ಬಳೆದಿದ್ದಾರೆ. ಸಂಗೋಳ್ಳಿ ರಾಯಣ್ಣನವರ ಪ್ರತಿಮೆಯನ್ನು ನಾಶ ಮಾಡಿದ್ದಾರೆ ಶಿವಾಜಿಯವರ ಪುತ್ಥಳಿಗೆ ಮುಖಕ್ಕೆ ಮಸಿ ಬಳಿಯಲಾಗಿದ್ದು ಇಂತಹ ಸಮಾಜಘಾತುಕರನ್ನು ಪೊಲೀಸ್ ಇಲಾಖೆ ಹೆಡೆಮುರಿ ಕಟ್ಟುವುದರ ಜೊತೆಗೆ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದರು.
ಬಸವಣ್ಣ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತವಾಗದೆ ವಿಶ್ವ ಗುರುವಾಗಿದ್ದಾರೆ. ದೇಶ ವಿದೇಶಗಳಲ್ಲೂ ಬಸವಣ್ಣನವರನ್ನು ಗೌರವಿಸುತ್ತಾರೆ ಆದರೆ ಕರ್ನಾಟಕದಲ್ಲಿ ಕೆಲ ಕಿಡಿಗೇಡಿಗಳು ಅವರ ಪುತ್ಥಳಿಗೆ ಮಸಿ ಬಳಿದಂತಹ ಸಂಗತಿ ದುರಂತದ ಘಟನೆಯಾಗಿದೆ ಎಂದು ಈ ಸಂಧರ್ಭದಲ್ಲಿ ವಿಷಾದ ವ್ಯಕ್ತಪಡಿಸಿದರು.
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್