POSTMAN NEWS

ನೈಜ ಸುದ್ದಿ ನೇರ ಬಿತ್ತರ..

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ವಿಧಿವಶ :

ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ (84) ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು.ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ತೋಟದ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಕಳೆದ ಕೆಲ ದಿನದ ಹಿಂದೆ ಬೆಂಗಳೂರಿನ ಮಗಳ ಮನೆಗೆ ತೆರಳಿದ್ದರು.
ರಾಜೇಶ್ವರಿ ತೇಜಸ್ವಿ ಅವರು ‘ನನ್ನ ತೇಜಸ್ವಿ’ ಮತ್ತು ‘ನಮ್ಮ ಮನೆಗೂ ಬಂದರು ಗಾಂಧೀಜಿ’ ಪುಸ್ತಕಗಳನ್ನು ಬರೆದಿದ್ದಾರೆ.

Leave a Reply

Your email address will not be published. Required fields are marked *

  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.