ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ವಿಧಾನಪರಿಷತ್ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಧು ಬಂಗಾರಪ್ಪನವರು ಆರ್ ಪ್ರಸನ್ನಕುಮಾರ್ ಅತ್ಯುತ್ತಮ ಅಭ್ಯರ್ಥಿಯಾಗಿದ್ದರೆ ಪ್ರಾಮಾಣಿಕವಾಗಿ ಈಗಾಗಲೇ ಕೆಲಸವನ್ನ ಮಾಡಿದ್ದಾರೆ ಹಾಗಾಗಿ ಅವರನ್ನು ಸರ್ವಾನುಮತದಿಂದ ಗೆಲ್ಲಿಸಬೇಕೆಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಬಿಜೆಪಿಯ ಆಡಳಿತ ಈಗಾಗ್ಲೇ ಜನಕ್ಕೆ ವಾಕರಿಕೆ ಬಂದಂತಾಗಿದೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೆಲಸ ಕಾರ್ಯಗಳು ನಡಿತಲ್ಲಾ ಮನೆ ಕೊಡದೆ ಇರುವವರು ಹಾಗೂ ಎನರ್ಜಿಯ ಹಣ ಬಿಡುಗಡೆ ಮಾಡದೆ ಇರುವವರು ಬಿಜೆಪಿಯವರು.
ಗ್ರಾಮ ಪಂಚಾಯಿತಿ ಸದಸ್ಯರ ಹಕ್ಕನ್ನು ಮೊಟಕು ಗೊಳಿಸಿದ ಸರ್ಕಾರವೆಂದರೆ ಅದು ಬಿಜೆಪಿ ಮಾತ್ರ ಎಂದು ಸರ್ಕಾರದ ಲೋಪದೋಷಗಳನ್ನು ಎತ್ತಿ ಹಿಡಿದರು.
ಆರ್ ಪ್ರಸನ್ನಕುಮಾರ್ ಅವರನ್ನು ಗೆಲ್ಲಿಸಿದರೆ ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಲ್ಲಿ ಅನುಮಾನವೇ ಇಲ್ಲ ಹಾಗಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ನಾವೆಲ್ಲ ಗೆಲ್ಲಿಸೋಣ ಎಂದು ಅಭ್ಯರ್ಥಿ ಪರ ಬ್ಯಾಟ್ ಬೀಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ರತ್ನಾಕರ ಹೊನಗೋಡು, ರಾಜನಂದಿನಿ, ಕಲಗೋಡು ರತ್ನಾಕರ ಹಾಗೂ ಸಾಗರ ಮತ್ತು ಆನಂದಪುರದ ಮುಖಂಡರುಗಳು ಉಪಸ್ಥಿತರಿದ್ದರು
ವರದಿ : ಪವನ್ ಕುಮಾರ್ ಕಠಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್