ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ
ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್ ಸೇರಿ ಎಲ್ಲಾ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಭಾಗಿಯಾಗಿದ್ದರು. ತೀರ್ಥಹಳ್ಳಿಯ ಬಿಜೆಪಿ ಕಾರ್ಯಾಲಯ ಪ್ರೇರಣಾದಿಂದ ಪ್ರತಿಭಟನಾ ಮೆರವಣಿಗೆ ಹೊರಟು ತಾಲೂಕು ಕಚೇರಿ ಎದುರು ರಸ್ತೆ ತಡೆ ನಡೆಸಿದರು.
ನಂತರ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ರಕ್ಷಾಣಾಧಿಕಾರಿ ಲಕ್ಷ್ಮೀಪ್ರಸಾದ್ ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ. ಇದರಲ್ಲಿ ಪೊಲೀಸರ ಕೈವಾಡವಿರುವುದು ತಿಳಿದು ಬಂದರೆ ಅವರನ್ನು ಕೆಲಸದಿಂದ ತೆಗೆದು ಹಾಕುತ್ತೇವೆ ಎಂದು ಭರವಸೆ ನೀಡಿದರು.
ಇನ್ನು ನಿನ್ನೆ ಭಜರಂಗದಳ ಕಾರ್ಯಕರ್ತರ ಮೇಲೆ ಗೋಕಳ್ಳರು ವಾಹನ ಹತ್ತಿಸಿದ್ದ ಪ್ರಕರಣದಲ್ಲಿ ಇಬ್ಬರೂ ಗಂಭೀರ ಸ್ಥಿತಿಯಲ್ಲಿ ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಚೇತರಿಕೆ ಕಾಣುತ್ತಿದೆ ಎಂದು ತಿಳಿದು ಬಂದಿದೆ.