Headlines

ಅನುದಾನ ಕೊರತೆ: ಗೃಹ ಸಚಿವರ ತವರು ಕ್ಷೇತ್ರದಲ್ಲಿಯೇ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ

ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರು ವಿಧಾನ ಪರಿಷತ್ ಚುನಾವಣೆ ಬಹಿಷ್ಕರಿಸಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಏಳು ಜನರು ಈ ಬಾರಿ ಮತದಾನ ಮಾಡದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ನಾಲೂರು ಕೊಳಿಗೆ ಗ್ರಾಮ ಪಂಚಾಯತಿಗೆ ಈವರೆಗೆ 1.68 ಕೋಟಿ ರೂಪಾಯಿ ಸರ್ಕಾರದ ಅನುದಾನ ಬಂದಿಲ್ಲ. ನಾಲೂರು ಕೊಳಿಗೆ ವ್ಯಾಪ್ತಿಯ ಮೂರು ಮರಳು ಕ್ವಾರಿಗಳು ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ ನೀಡುತ್ತಿವೆ. ಹೀಗಾಗಿ ಸರ್ಕಾರ ಪ್ರತಿವರ್ಷ ಪಂಚಾಯತಿಗೆ 84 ಲಕ್ಷ ರೂಪಾಯಿ ಅನುದಾನ ನೀಡಬೇಕಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಸರ್ಕಾರ ಯಾವುದೇ ಅನುದಾನ ಬಿಡುಗಡೆ ಮಾಡಿಲ್ಲ.

ಅನುದಾನವಿಲ್ಲದೆ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿ ನಡೆಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪರಿಷತ್ ಚುನಾವಣೆ ಬಹಿಷ್ಕರಿಸಲು ನಾಲೂರು ಕೊಳಿಗೆ ಪಂಚಾಯತಿ ಸದಸ್ಯರು ಮುಂದಾಗಿದ್ದಾರೆ.

About The Author

Leave a Reply

Your email address will not be published. Required fields are marked *