ಶಿವಮೊಗ್ಗದಲ್ಲಿ ಪೌರಕಾರ್ಮಿಕರ ಮೇಲೆ ಹಲ್ಲೆ ವಿಚಾರ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಖುದ್ದು ಎಸ್ಪಿಗೆ ಕರೆ ಮಾಡಿದ್ದೇಕೆ !!! ದೂರವಾಣಿಯಲ್ಲಿ ಹೇಳಿದ್ದಾದರೂ ಏನು ???

ಶಿವಮೊಗ್ಗ : ನಗರದಲ್ಲಿ ಇತ್ತೀಚೆಗೆ ಪೌರ ಕಾರ್ಮಿಕರ ಮೇಲೆ ಕೆಲವು ಕಿಡಿಗೇಡಿಗಳು ಕಸ ವಿಲೇವಾರಿಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಪೌರ ಕಾರ್ಮಿಕರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಸಚಿವ ಕೆ.ಎಸ್. ಈಶ್ವರಪ್ಪ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ವಿಲೇವಾರಿ ಮಾಡುವವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಪೌರ ಕಾರ್ಮಿಕರು ಜನರ ಸೇವೆ ಮಾಡುತ್ತಾರೆ. ಅವರ ಮೇಲೆ ಹಲ್ಲೆ ಮಾಡುವಷ್ಟರಮಟ್ಟಿಗೆ ದುಷ್ಟರು ಇಳಿದಿದ್ದಾರೆ. ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದರು.ಪೊಲೀಸ್ ಇಲಾಖೆ ನಿರ್ಲಕ್ಷ್ಯ ಭಾವನೆ ತಾಳಬಾರದು. ಯಾರೋ ಒಂದಿಬ್ಬರನ್ನು ಮಾತ್ರ ಬಂಧಿಸಿದ್ದಾರೆ. ಅವರು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದ್ದಾರೆ. ಹೀಗೆ ಆಗಬಾರದು, ತಾವೇ ಖುದ್ದಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ನೀಡುವೆ ಎಂದರು.

ಕಸವಿಲೇವಾರಿ ವೇಳೆ 10-12 ಜನ ಹಲ್ಲೆ ನಡೆಸಿದ್ದರು.  ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಸ್ಪಿ ಗೆ ಮೊಬೈಲ್ ನಲ್ಲಿ ಕರೆ ಮಾಡಿ ಹಲ್ಲೆ ಮಾಡಿದವರ ಬಂಧನಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಸೂಚಿಸಿದರು.

ಇನ್ನು ತುಂಗಾ ನಗರ ಪೊಲೀಸ್ ಠಾಣೆಯ  ಅಧಿಕಾರಿಗಳ ವಿರುದ್ಧ ಸಚಿವ ಕೆ ಎಸ್ ಈಶ್ವರಪ್ಪ ಗರಂ ಆದರು. ತುಂಗಾ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಏನು ದನ ಕಾಯುತ್ತಿದ್ದಾರ?  ಗಾಂಜಾ ಮತ್ತಿನಲ್ಲಿ ಹಲ್ಲೆ ಮಾಡಿದ್ದಾರೆ. ಇನ್ನು ಯಾರನ್ನು ಸಹ ಬಂಧಿಸಲು ಆಗಿಲ್ಲ. ನಾನು ಸಂಜೆ ವಾಪಸ್ ಬರುವುದರಲ್ಲಿ ಎಲ್ಲರ ಬಂಧನ ಆಗಬೇಕು ಎಂದು ಖಡಕ್ ಎಚ್ಚರಿಕೆ ನೀಡಿದ ಸಚಿವ ಕೆ ಎಸ್ ಈಶ್ವರಪ್ಪ ಎಸ್ಪಿಗೆ ಮೊಬೈಲ್ ನಲ್ಲಿಯೇ  ಸೂಚಿಸಿದರು.

ಶಿವಮೊಗ್ಗದಲ್ಲಿ ಪೌರಕಾರ್ಮಿಕರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಿದ್ದರೂ ಅವರ ಮೇಲೆ ಕೆಲವರು ದಬ್ಬಾಳಿಕೆ ಮಾಡುತ್ತಿದ್ದಾರೆ. ಇತ್ತೀಚೆಗೆ ಜೆಪಿ ನಗರದಲ್ಲಿ ಕಸ ಸಂಗ್ರಹಿಸಲು ಹೋಗಿದ್ದ ಪೌರಕಾರ್ಮಿಕರ ಮೇಲೆ ಕೆಲವರು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದೇನೆ. ಹಲ್ಲೆಗೊಳಗಾದ ಕಾರ್ಮಿಕರೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.

ಪೊಲೀಸ್ ಇಲಾಖೆ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ. ಇದುವರೆಗೂ ಕ್ರಮಕೈಗೊಳ್ಳದೆ ಇಬ್ಬರನ್ನು ಮಾತ್ರ ಬಂಧಿಸಿದ್ದಾರೆ. ಶಿವಮೊಗ್ಗದಲ್ಲಿ ಏನೇನು ನಡೆಯುತ್ತಿದೆ ಎಂದು ಗೊತ್ತಿದೆ. ಪೊಲೀಸ್ ಇಲಾಖೆ ಅಲರ್ಟ್ ಆಗಬೇಕಿದೆ. ಬಗ್ಗೆ ಜಿಲ್ಲೆಯಲ್ಲಿ ಗೂಂಡಾಗಳಿಗೆ, ಗಲಾಟೆ ಮಾಡುವವರಿಗೆ ಯಾವುದೇ ಭಯವಿಲ್ಲದಂತಾಗಿದೆ. ಇಂತಹ ವಾತಾವರಣ ಸರಿ ಮಾಡುವ ದಿಕ್ಕಿನಲ್ಲಿ ಪೊಲೀಸ್ ಇಲಾಖೆ ಕೆಲಸ ಮಾಡಬೇಕು ಎಂದರು.

Leave a Reply

Your email address will not be published. Required fields are marked *