ಕಾರ್ಗಲ್ ಗ್ರಾಮದಲ್ಲಿ ಕಲುಷಿತ ನೀರು,ಆಹಾರ ಸೇವನೆಯಿಂದ ಸುಮಾರು 80 ಕ್ಕೂ ಹೆಚ್ಚು ಜನ ಅಸ್ವಸ್ಥ : ಶಾಸಕ ಹರತಾಳು ಹಾಲಪ್ಪ ಭೇಟಿ

ಸಾಗರ : ತಾಲೂಕಿನ ಕಾರ್ಗಲ್ ಮತ್ತು ಜೋಗದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ  ಸುಮಾರು 80 ಜನ ಅಸ್ವಸ್ಥರಾಗಿ ಸಾಗರ ತಾಲೂಕು ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕಾರ್ಗಲ್ ನಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಆಹಾರ ಸೇವನೆ ಮಾಡಿದವರಲ್ಲಿ ವಾಂತಿ ಭೇದಿ, ಜ್ವರ
ಕಾಣಿಸಿಕೊಂಡಿದೆ. ಜೋಗದಲ್ಲಿ ಮೆಸ್ ಮತ್ತು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಈ ರೀತಿಯ ರೋಗ ಲಕ್ಷಣ ಕಂಡುಬಂದಿದೆ.

ನ.11 ರಂದು ನಡೆದ ಖಾಸಗಿ ಕಾರ್ಯಕ್ರಮದಲ್ಲಿ
ಭಾಗಿಯಾದವರಲ್ಲಿ ಈ ರೀತಿ ವಾಂತಿ ಭೇದಿ ಮತ್ತು
ಜ್ವರದ ಲಕ್ಷಣ ಕಾಣಿಸಿಕೊಂಡಿದೆ. ನೀರಿನ ಸ್ಯಾಂಪಲ್ಸ್ ನ್ನ ಜಿಲ್ಲಾ ಸರ್ವೇಕ್ಷಣ ಘಟಕ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಆಹಾರದ ಸ್ಯಾಂಪಲ್ಸ್  ಸಂಗ್ರಹಕ್ಕೂ ಸೂಚಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 

ಸ್ಥಳಕ್ಕೆ ತೆರಳಿ ಸ್ಪಂದಿಸಿದ ಶಾಸಕ ಹರತಾಳು ಹಾಲಪ್ಪ
ಕಲುಷಿತ ನೀರು ಹಾಗೂ ಆಹಾರ ಸೇವನೆಯಿಂದ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿ ಅನೇಕರು ಕಾರ್ಗಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾಗಿರುವ ವಿಷಯ ತಿಳಿದು ಶಾಸಕರಾದ ಹೆಚ್.ಹಾಲಪ್ಪ ನವರು, ಸದರಿ ಆಸ್ಪತ್ರೆಗೆ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿ, ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದರೆ ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

Leave a Reply

Your email address will not be published. Required fields are marked *