ಎಚ್ಚರ , ನಿಮ್ಮ ಮೊಬೈಲ್ ನಲ್ಲಿ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಇಟ್ಟುಕೊಳ್ಳುವುದು ಅಪರಾಧ – ಕ್ರಮಕ್ಕೆ ಮುಂದಾದ ಎಸ್ ಐಟಿ | SIT
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡದಂತೆ ಎಸ್ಐಟಿ ಖಡಕ್ ಸೂಚನೆ ನೀಡಿತ್ತು. ಈಗ ಅಶ್ಲೀಲ ವೀಡಿಯೋಗಳನ್ನು ನಿಮ್ಮ ಬಳಿ ಇಟ್ಟುಕೊಳ್ಳುವುದ ಅಪರಾಧ ಎಂಬುದಾಗಿ ಮನವರಿಕೆ ಮಾಡಿಕೊಟ್ಟಿದೆ.
ಈ ಕುರಿತು ಸಿಐಟಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಅದರಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಅಧಿನಿಯಮದಲ್ಲಿ ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ, ಪ್ರಸಾರ ಮಾಡುವ ವ್ಯಕ್ತಿಗಳನ್ನು ಸಂದೇಶದ ರಚನಾಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಆದ್ದರಿಂದ ಯಾರಾದರೂ ತಮ್ಮ ಬಳಿ ಅಶ್ಲೀಲ ವಿಡಿಯೋ, ಚಿತ್ರಗಳು ಹಾಗೂ ಧ್ವನಿ ಮುದ್ರಣಗಳನ್ನು ಇಟ್ಟುಕೊಂಡಿದ್ದರೂ ಅದು ಅಪರಾಧವಾಗುತ್ತದೆ. ಕಾರಣ ಜನರು ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಿಡಿಯೋ ಹಾಗೂ ಚಿತ್ರಗಳನ್ನು ಇಟ್ಟುಕೊಳ್ಳುವುದನ್ನು ಅಥವಾ ಪ್ರಸಾರ ಮಾಡುವುದನ್ನು ನಿರ್ಬಂಧಿಸಿಕೊಳ್ಳುವುದು ಸೂಕ್ತ ಎಂದಿದ್ದಾರೆ.
ಒಂದು ವೇಳೆ ಅಂಥಹ ವಿಡಿಯೋ, ಚಿತ್ರಗಳು ಮತ್ತು ಧ್ವನಿ ಮುದ್ರಣಗಳನ್ನು ತಮ್ಮ ಮೊಬೈಲ್ ಅಥವಾ ಇತರೆ ಸಾಧನಗಳಲ್ಲಿ ಹೊಂದಿದ್ದರೆ ‘ಡಲೀಟ್’ ಮಾಡುವುದರಿಂದ ಕಾನೂನಿನ ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್