ತೀರ್ಥಹಳ್ಳಿ : ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಸಂಘ ಪರಿವಾರಗಳು ತೀರ್ಥಹಳ್ಳಿ ಇವರು ಆಯೋಜಿಸಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ತೀರ್ಥಹಳ್ಳಿಯ ರೋಟರಿ ರಕ್ತನಿಧಿಯಲ್ಲಿ ಇಂದು ನಡೆಯಿತು.
ಸಂಘ ಪರಿವಾರದ ಸದಸ್ಯರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ರೋಟರಿ ರಕ್ತನಿಧಿ ತೀರ್ಥಹಳ್ಳಿಯ ಟೆಕ್ನೀಶಿಯನ್ ಅರುಣ್ ಕೆರೋಡಿ ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿ “ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದರೆ ಸೇವೆ, ಸಂಘದಿಂದ ಪ್ರತಿ ಮೂರು ತಿಂಗಳಿಗೊಮ್ಮೆ ಒಂದು ದಿನವನ್ನು ಸೇವೆಗೆ ಮುಡಿಪಾಗಿಡುತ್ತಾರೆ ಅದರಲ್ಲಿ ಸ್ವಚ್ಚತಾ ಕಾರ್ಯಗಳು ಹಾಗೂ ರಕ್ತದಾನ ಕೂಡಾ ಸೇರಿಕೊಳ್ಳುತ್ತವೆ. ಕೊರೋನಾ ಅಟ್ಟಹಾಸ ಮುಗಿಲು ಮುಟ್ಟಿದ ಸಂದರ್ಭದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಮಾಡಿದ ಸೇವೆ ಶ್ಲಾಘನೀಯ, ಯುವಕರು ಹಣಗಳಿಕೆ ಹಾಗೂ ಕುಟುಂಬಕ್ಕಷ್ಟೇ ಸೀಮಿತವಾಗದೇ ಇಂತಹಾ ಸಮಾಜಮುಖಿ ವಿಚಾರಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೇಶ ಹಾಗೂ ಸಮಾಜಕ್ಕೆ ಹಿತ” ಎಂದರು…
ರಕ್ತದಾನದ ಈ ದಿನದ ಕಡೆಯ ದಾನಿಯಾಗಿದ್ದ ಶ್ರೀವತ್ಸ ಕುರುವಳ್ಳಿ ರವರು ಮಾತನಾಡಿ ” ಸಂಘ ನಮಗೆ ಸಮರ್ಪಣಾ ಭಾವವನ್ನು ಕಲಿಸುತ್ತದೆ, ರಕ್ತದಾನ ಮಾಡಿ ಸಂತಸಗೊಂಡಿದ್ದೇನೆ ಎಂದರು.
ಸುದ್ದಿ: ಪ್ರಶಾಂತ್ ಮೇಗರವಳ್ಳಿ
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್