ಬೆಂಗಳೂರು: ಮೈಸೂರಿನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನಾನು ಈಗ ಮಾಹಿತಿ ಕೊಡಲು ಸಾಧ್ಯವಿಲ್ಲ. ಆದರೆ ಇನ್ನೆರಡು ಗಂಟೆಯ ಒಳಗೆ ನಿಮಗೆ ಎಲ್ಲಾ ಮಾಹಿತಿ ನೀಡುತ್ತೇವೆ. ನಾನು ಅಥವಾ ಪೊಲೀಸರು ಸುದ್ದಿಗೋಷ್ಠಿ ನಡೆಸುತ್ತಾರೆ ಎಂದು ತಿಳಿಸಿದರು.
ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯದ ಬಳಿಕ ಆರೋಪಿಗಳು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ ಎಲ್ಲಾ ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್