ತೀರ್ಥಹಳ್ಳಿ: ಕರಾವಳಿ ಭಾಗ ಹಾಗೂ ಕೇರಳದೊಂದಿಗೆ ನಿಕಟ ಸಂಪರ್ಕ ಹೊಂದಿರುವ ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ತೀರ್ಥಹಳ್ಳಿಯಲ್ಲಿ ಕೊರೋನಾ ತಪಾಸಣಾ ಕೇಂದ್ರ ಸ್ಥಾಪಿಸಲು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಅನುಮತಿ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲೆ ಹಾಗೂ ತೀರ್ಥಹಳ್ಳಿ ಭಾಗದಲ್ಲಿ ಇನ್ನೂ ಕೂಡಾ ಕೋವಿಡ್ ಸಂಪೂರ್ಣ ಹತೋಟಿಗೆ ಬಾರದಾಗಿದೆ ಜತೆಗೆ ಮೂರನೆಯ ಅಲೆ ಪ್ರಾರಂಭವಾಗುವ ಅನುಮಾನಗಳಿದ್ದು ತ್ವರಿತ ತಪಾಸಣೆ ಹಾಗೂ ಚಿಕಿತ್ಸೆಗೆ ಸರಕಾರ ಮಹತ್ವದ ಕ್ರಮ ಕೈಗೊಂಡಿದೆ.
ಇದರ ಜತೆಗೆ ಆಗುಂಬೆಯಲ್ಲಿ ಚೆಕ್ ಪೋಸ್ಟ್ ಬಿಗಿಗೊಳಿಸಲು ನಿರ್ಧರಿಸಿದ್ದು ಕೇರಳ ಹಾಗೂ ಇನ್ನಿತರೆ ಹೊರರಾಜ್ಯಗಳಿಂದ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ.
ತೀರ್ಥಹಳ್ಳಿ, ಸಾಗರ, ಹೊಸನಗರ, ಜೋಗ, ಸಿಗಂದೂರು ಮುಂತಾದ ಸ್ಥಳಗಳಿಗೆ ಪ್ರವಾಸಿಗರು ಆಗಮಿಸುತ್ತಿದ್ದು ಹೋಂ ಸ್ಟೇ ಹಾಗೂ ರೆಸಾರ್ಟ್ ಗಳಲ್ಲಿ ರೂಂ ಬುಕ್ ಮಾಡುವವರ ಮೇಲೆ ನಿಗಾ ಇರಿಸಿದ್ದು ಕಡ್ಡಾಯವಾಗಿ ಕೋವಿಡ್ ತಪಾಸಣೆಗೆ ಒಳಪಡಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಮಾನ್ಯ ಶ್ರೀ ಕೆ.ಬಿ.ಶಿವಕುಮಾರ್ ರವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.
ವರದಿ: ಪ್ರಶಾಂತ್ ಮೇಗರವಳ್ಳಿ