ರಿಪ್ಪನ್ ಪೇಟೆ : ಜಗತ್ತನ್ನೇ ತಲ್ಲಣಗೊಳಿಸಿರುವ ಕೊರೋನಾದ ನಡುವೆ ಪ್ರತಿಯೊಬ್ಬರೂ ಆರೋಗ್ಯವನ್ನು ಕಾಪಾಡುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಮಳಲಿ ಮಠದ ಡಾ.ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ತೀರ್ಥಹಳ್ಳಿ ತಾಲೂಕಿನ ಅರಳಿಸುರಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಎರಡನೆಯ ಹಂತದ ಕರೋನ ಲಸಿಕೆಯನ್ನು ಪಡೆದುಕೊಂಡು ಮಾಧ್ಯಮದವರಿಗೆ ಮಾತನಾಡಿದ ಅವರು ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಕೊರೋನಾ ಸೇರಿದಂತೆ ಇನ್ನಿತರ ಯಾವುದೇ ರೋಗಗಳು ಬರದಂತೆ ಮುಂಜಾಗ್ರತೆಯನ್ನು ವಹಿಸಬೇಕು. ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೊರೋನ ಒಂದನೇ ಮತ್ತು ಎರಡನೇ ಅಲೆಯು ಇಡೀ ಮಾನವ ಸಂಕುಲವನ್ನು ಸಂಕಷ್ಟಕ್ಕೀಡು ಮಾಡಿದೆ. ಇನ್ನು ಕೆಲವೇ ದಿನಗಳಲ್ಲಿ ಮೂರನೆಯದು ಅಪ್ಪಳಿಸಲಿದೆ ಎಂದು ಈಗಾಗಲೇ ತಜ್ಞರು ಶಿಫಾರಸು ಮಾಡಿದ್ದಾರೆ. ಆದ್ದರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಸಹ ಕೊರೊನಾ ಲಸಿಕೆ ಪಡೆಯುವುದರ ಮೂಲಕ ಸೋಂಕು ಹರಡದಂತೆ ಎಚ್ಚರಿಕೆ ವಹಿಸ ಬೇಕು.ಸರಕಾರ ನೀಡಿರುವ ಸಲಹೆ ಸೂಚನೆಗಳನ್ನು ತಪ್ಪದೇ ಪಾಲಿಸಬೇಕು. ಪ್ರತಿಯೊಬ್ಬರು ಆರೋಗ್ಯವೇ ಭಾಗ್ಯ ಎಂಬ ತತ್ವದಡಿಯಲ್ಲಿ ಮುನ್ನಡೆದರೆ ಕೊರೊನಾ ಸೋಂಕಿನಿಂದ ಮುಕ್ತರಾಗಬಹುದು ಎಂದು ತಿಳಿಸಿದರು.
ವರದಿ: ಸಬಾಸ್ಟಿನ್ ಮ್ಯಾಥ್ಯೂಸ್