ಸಾಗರ : ಇಂದು ಮುಂಜಾನೆ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಕಾಸ್ಪಾಡಿ ಕೆರೆಯ ಬಳಿ ನಡೆದ ಬಸ್ ಹಾಗೂ ಸ್ಕೂಟಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ದೀಪು ಎಂಬ ವ್ಯಕ್ತಿ ಚಿಕಿತ್ಸೆ ಫಲಿಸದೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಇಂದು ಮುಂಜಾನೆ ಕಾಸ್ಪಾಡಿ ಬಳಿ ಕೆಎಸ್ಆರ್ ಟಿಸಿ ಬಸ್ ಎದುರುಗಡೆ ಬಂದ ಸ್ಕೂಟಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿತ್ತು.ಬಸ್ ನಲ್ಲಿ 28 ಜನ ಪ್ರಯಾಣಿಕರಿದ್ದರು.ಅದೃಷ್ಟವಶಾತ್ ಬಸ್ ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿರಲಿಲ್ಲ.ಸ್ಥಳಿಯರ ಸಮಯ ಪ್ರಜ್ಞೆಯಿಂದ ಎಲ್ಲಾ ಬಸ್ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು.
ಸ್ಕೂಟಿಯಲ್ಲಿ ಸಿಗಂದೂರು ದೇವಿಯ ದರ್ಶನಕ್ಕೆ ಹೊರಟಿದ್ದ ಶಿವಮೊಗ್ಗ ಗಾಂಧಿಬಜಾರ್ ನಿವಾಸಿಗಳಾದ ದೀಪು ಹಾಗೂ ಆತನ ಸ್ನೇಹಿತ ಶಬರೀಶ್ ಗಂಭೀರವಾಗಿ ಗಾಯಗೊಂಡಿದ್ದರು ಕೂಡಲೇ ಸ್ಥಳದಲ್ಲಿ ಇದ್ದವರು ತಕ್ಷಣ ಅಂಬ್ಯುಲೆನ್ಸ್ ಮೂಲಕ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದರು.
ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದೀಪು ಎಂಬುವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿ ಸಾಗರ ಡಿವೈಎಸ್ ಪಿ ವಿನಾಯಕ್ ಶೆಟಗೇರಿ,ಎಎಸ್ಐ ಹನುಮಂತಪ್ಪ,ಶಿವಕುಮಾರ ಪರಿಶೀಲನೆ ನಡೆಸುತ್ತಿದ್ದಾರೆ ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸಾಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.
ವರದಿ : ಪವನ್ ಕುಮಾರ್ ಕಠಾರೆ
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..