ಶಿವಮೊಗ್ಗ: ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಕೈ ಹಿಡಿಯವ ಮುಹೂರ್ತ ಫಿಕ್ಸ್ ಆಗಿದೆ.
ಇದೇ ತಿಂಗಳ 30 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜಿವಾಲಾ ನೇತೃತ್ವದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ.ಮಧುಬಂಗಾರಪ್ಪನವರೊಂದಿಗೆ ಅವರ ಬೆಂಬಲಿಗರು ಕೂಡ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗದಲ್ಲಿ ಬೃಹತ್ ಸಮಾವೇಶ ನಡೆಸಿ ಕಾಂಗ್ರೆಸ್ ಸೇರ್ಪಡೆಯಾಗುವ ಉದ್ದೇಶವನ್ನ ಹೊಂದಿದ್ದರು ಆದರೆ ಕೋವಿಡ್ ಕಾರಣದಿಂದ ಕಾರ್ಯಕ್ರಮ ರದ್ದುಗೊಂಡಿತ್ತು. ಈಗ ಹುಬ್ಬಳ್ಳಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಲು ಮಧು ಬಂಗಾರಪ್ಪ ತೀರ್ಮಾನ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಮಧು ಬಂಗಾರಪ್ಪ ನವರು ಈ ಹಿಂದೆ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.ನಂತರ ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು.ಜೆಡಿಎಸ್ ನಾಯಕರ ಬಳಿ ಮುನಿಸಿಕೊಂಡಿದ್ದ ಮಧು ಬಂಗಾರಪ್ಪ ನಿಧಾನವಾಗಿ ಜೆಡಿಎಸ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು.
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..