ಸೊರಬ: ಇಲ್ಲಿನ ಸಮೀಪದ ಉಳವಿಯ ಬಸ್ ನಿಲ್ದಾಣಕ್ಕೆ ಕಾಲಿಡಲು ಹೆದರುವ ಪರಿಸ್ಥಿತಿ ಪ್ರಯಾಣಿಕರದ್ದು,ಪಟ್ಟಣದಲ್ಲಿರುವ ಬಸ್ ನಿಲ್ದಾಣ ಹಾಳು ಕೊಂಪೆಯಂತಾಗಿದ್ದು, ಇದ್ದೂ ಇಲ್ಲದಂತಾಗಿದೆ.
ಸೊರಬಕ್ಕೆ ಹೊಂದಿರುವ ಪಟ್ಟಣಕ್ಕೆ ಅಗತ್ಯ ತಕ್ಕಂತೆ ಬಸ್ ನಿಲ್ದಾಣ ಅವಶ್ಯಕತೆ ಇದೆ. ಬೆಳೆಯುತ್ತಿರುವ ಪಟ್ಟಣಕ್ಕೆ ಬಸ್ ನಿಲ್ದಾಣದ ಭಾಗ್ಯ ಯಾವಾಗ ಕೂಡಿ ಬರುತ್ತದೆ ಎಂಬ ಪ್ರಶ್ನೆ ಎದುರಾಗಿದೆ.
ಬಸ್ ನಿಲ್ದಾಣದ ಸುತ್ತ ಕಸ ಕಡ್ಡಿ ಹುಲ್ಲು ಬೆಳೆದಿದ್ದು,ಬಸ್ ನಿಲ್ದಾಣಕ್ಕೆ ಹೋಗಲು ಮಾರ್ಗವೇ ಇಲ್ಲದಾಗಿದೆ,ಒಳಗೆ ಬಾಟಲಿ ಕಸ ಕಡ್ಡಿ ಕೆಸರು ತುಂಬಿದೆ, ಬಣ್ಣವಿಲ್ಲದೆ ಸೊರಗುತ್ತಿದೆ,ಪ್ರಯಾಣಿಕರು ಶಾಲಾ ಮಕ್ಕಳು ಬಸ್ ಗಾಗಿ ಅಕ್ಕ ಪಕ್ಕದ ಅಂಗಡಿ ಕಟ್ಟೆಮೇಲೆ ನಿಂತು ಬಸ್ ಹತ್ತಬೇಕಾದ ಪರಿಸ್ಥಿತಿ ಇದೆ.
ಸ್ಥಳೀಯ ಗ್ರಾಮ ಪಂಚಾಯತ್ ನವರು ನಿದ್ದೆ ಯಿಂದ ಎದ್ದು ಈ ಸಮಸ್ಯೆ ಬಗ್ಗೆ ಗಮನಹರಿಸಿ ಬಸ್ ನಿಲ್ದಾಣ ಹಾಗೂ ಚರಂಡಿ ವ್ಯವಸ್ಥೆ ಸರಿಪಡಿಸಬೇಕೆಂದು ಗ್ರಾಮಸ್ಥರ ಬೇಡಿಕೆಯಾಗಿದೆ.
ವರದಿ: ವೆಂಕಟೇಶ್ ಚಂದ್ರಗುತ್ತಿ
ಪೋ:+919845783961
ಪೋಸ್ಟ್ ಮ್ಯಾನ್ ನ್ಯೂಸ್ ನ ಎಲ್ಲಾ ಸುದ್ದಿಗಳ ಅಪ್ ಡೇಟ್ ಪಡೆಯಲು ಈ ಕೆಳಗಿನ ವಾಟ್ಸಾಪ್ ಲಿಂಕ್ ಬಳಸಿ..
About The Author
ನಾನು ಪೋಸ್ಟ್ ಮ್ಯಾನ್ ನ್ಯೂಸ್ ಮಾದ್ಯಮದ ಹಿಂದೆ ಇರುವ ಒಬ್ಬ ಸ್ಥಳೀಯ ಸುದ್ದಿಪ್ರೇಮಿ ಪತ್ರಕರ್ತ. ಕಳೆದ ಐದು ವರ್ಷಗಳಿಂದ ಒಂದು ಕನಸನ್ನು ಜೀವಂತವಾಗಿಟ್ಟಿದ್ದೇನೆ — ನಮ್ಮೂರ ಸುದ್ದಿಗಳು ಲೋಕದವರೆಗೆ ತಲುಪಬೇಕು ಎಂಬದು.
ಸ್ಥಳೀಯ ಪತ್ರಿಕೆಗಳಿಂದ ಆರಂಭಿಸಿ, ರಾಜ್ಯಮಟ್ಟದ ನ್ಯೂಸ್ ಚಾನೆಲ್ಗಳ ಬೆಂಗಳೂರು ಕಚೇರಿಯವರೆಗೆ ಮಾಧ್ಯಮದ ಎಲ್ಲಾ ಹಂತಗಳಲ್ಲಿ ಕೆಲಸ ಮಾಡಿದ ಅನುಭವ ನನ್ನದಾಗಿದೆ. ಆದರೆ ಅಲ್ಲಿ ಒಂದು ಖಾಲಿ ಅನಿಸಿತು — ನಿಜವಾದ ಸ್ಥಳೀಯ ಧ್ವನಿಗೆ ವೇದಿಕೆ ಇಲ್ಲ. ಅದಕ್ಕೆ ಪರ್ಯಾಯವಾಗಿ ಹುಟ್ಟಿತು “ಪೋಸ್ಟ್ ಮ್ಯಾನ್ ನ್ಯೂಸ್.”
ಇಲ್ಲಿ ಸುದ್ದಿ ಅಂದ್ರೆ ಸುದ್ದಿ ಮಾತ್ರ. ಯಾರ ಪರವೂ ಅಲ್ಲ, ಯಾವ ಪಕ್ಷದ ಪರವೂ ಅಲ್ಲ. ನನ್ನ ನಿಲುವು ಸ್ಪಷ್ಟ — ಸುದ್ದಿ ಹೇಳಬೇಕು, ತೀರ್ಪು ಕೊಡಬಾರದು. ಕೆಲವೊಮ್ಮೆ ಓದುಗರ ಪ್ರತಿಕ್ರಿಯೆಗಳು ಬೇರೆ ಬಣ್ಣ ತೊಡುತ್ತವೆ, ಆದರೆ ನನ್ನ ಪ್ರತಿಕ್ರಿಯೆ ಕೆಲಸದ ಮೂಲಕವೇ.
ಪೋಸ್ಟ್ ಮ್ಯಾನ್ ನ್ಯೂಸ್ ಇಂದು ಕೇವಲ ಒಂದು ಪೇಜ್ ಅಲ್ಲ, ಅದು ಒಂದು ಚಳವಳಿಯಾಗಿದೆ — ಪೋಸ್ಟ್ ಮ್ಯಾನ್ ನ್ಯೂಸ್ನ ಉದ್ದೇಶ ಕೇವಲ ವರದಿ ಮಾಡುವುದು ಅಲ್ಲ; ನಮ್ಮೂರ ಘಟನೆಗಳು, ಪ್ರತಿಭೆಗಳು, ಸಮಸ್ಯೆಗಳು, ಸಾಧನೆಗಳು — ಇವುಗಳನ್ನು ಹೊರಲೋಕಕ್ಕೆ ತಲುಪಿಸುವ ಸೇತುವೆಯಾಗಿರಬೇಕು. ಹಣ ಪಡೆದು ಸುದ್ದಿ ಮಾಡುವ ಅಭ್ಯಾಸವೂ ಇಲ್ಲ, ಹವ್ಯಾಸವೂ ಇಲ್ಲ.
ಮುಂದಿನ ಹಂತದಲ್ಲಿ ನಾವು ಔಟ್ಸೋರ್ಸ್ ವ್ಯವಸ್ಥೆ ಮೂಲಕ ಸ್ಥಳೀಯ ವರದಿಗಾರರನ್ನು, ಕಥೆಗಾರರನ್ನು ಸೇರಿಸಿಕೊಂಡು ಈ ವೇದಿಕೆಯನ್ನು ಇನ್ನಷ್ಟು ಜೀವಂತಗೊಳಿಸುವ ಉದ್ದೇಶದಲ್ಲಿದ್ದೇವೆ.
ನಮ್ಮ ಗುರಿ ಒಂದೇ — ಸಣ್ಣ ಊರುಗಳ ಸತ್ಯ ಕತೆಗಳು ದೊಡ್ಡ ಮಟ್ಟದಲ್ಲಿ ಲೋಕದ ಕಿವಿಗೆ ತಲುಪಬೇಕು.
– ರಫ಼ಿ ರಿಪ್ಪನ್ ಪೇಟೆ
ಸಂಪಾದಕರು , ಪೋಸ್ಟ್ ಮ್ಯಾನ್ ನ್ಯೂಸ್